ಅಭಿಷೇಕ್-ನಿಖಿಲ್ ಬದಲು ಲೋಕಸಭಾ ಅಖಾಡಕ್ಕೆ ಇಳಿಯುತ್ತಾರ ಈ ಸ್ಟಾರ್ ನಟಿ..!!

ಮುಂಬರುವ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದಂತೆ.. ಚುನಾವಣೆಯ ಕಣಗಳು ಹೆಚ್ಚು ರಂಗನ್ನು ಪಡೆಯುತ್ತಿದ್ದಾವೆ… ಅದರಲ್ಲೂ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಯಾವ ಪಕ್ಷದಿಂದ ಯಾವ ಅಭ್ಯರ್ಥಿಗಳು ಕಣಕ್ಕಿಳಿಯುತ್ತಾರೆ ಎಂಬುದು ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ..ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದು, ಬಹುತೇಕ ಜೆಡಿಎಸ್ನಿಂದ ಮಂಡ್ಯ ಅಭ್ಯರ್ಥಿಯೇ ಕಣಕ್ಕಿಳಿಯುತ್ತಾರೆ ಎಂಬ ಲೆಕ್ಕಚಾರವಿದೆ. ಮಂಡ್ಯ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕೂಡ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಜೆಡಿಎಸ್ ಶಾಸಕರೇ ಗೆಲುವು ಸಾಧಿಸಿರುವುದರಿಂದ ಲೋಕಸಭಾ ಕ್ಷೇತ್ರವನ್ನೂ ಸುಲಭವಾಗಿ ಗೆಲ್ಲಬಹುದು ಎಂಬ ಲೆಕ್ಕಾಚಾರ ಜೆಡಿಎಸ್ ಪಕ್ಷಕ್ಕಿದೆ. ಇದೇ ಕಾರಣಕ್ಕೆ ಅಭ್ಯರ್ಥಿಯಾಗಲೂ ಸಹ ತೀವ್ರ ಪೈಪೋಟಿಯಿದೆ.
ಒಂದು ಕಡೆ ಹಾಲಿ ಸಂಸದ ಎಲ್.ಆರ್.ಶಿವರಾಮೇಗೌಡ ತಾವೇ ಅಭ್ಯರ್ಥಿಯಾಗಲು ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದಾರೆ. ಆದರೆ, ಅಚ್ಚರಿ ಎಂಬಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಕೂಡ ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.. ಆದ್ರೆ ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಎಂಟ್ರಿಕೊಡಲು ಮತ್ತೊಬ್ಬರು ಅಡ್ಡಿಯಾಗುವ ಸಾಧ್ಯತೆಗಳಿವೆ. ಯಾಕಂದ್ರೆ ಅಂಬರೀಶ್ ಅವರ ಪತ್ನಿ ಸಮಲತ ಅಂವರೀಶ್ ಅವರನ್ನು ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುವಂತೆ ಸ್ಯಾಂಡಲ್ ವುಡ್ ಒತ್ತಾಯ ಮಾಡಿದೆ.ಶನಿವಾರ ಮಂಡ್ಯದಲ್ಲಿ ನಡೆದಿದ್ದ ಅಂಬಿ ನುಡಿನಮನ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನಟರು ಸುಮಲತಾ ಅವರನ್ನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಆಗ್ರಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Comments