ಬಿಎಸ್ ವೈ ಸಿಡಿಸಿದ್ರಾ ಹೊಸ ಬಾಂಬ್: ಜೆಡಿಎಸ್ ನಾಯಕರೇ ಬಿಜೆಪಿಗೆ ಆಮಿಷವೊಡ್ಡಿದ್ದಾರೆ ..!!

ರಾಜಕೀಯ ವಲಯದಲ್ಲಿ ಪಕ್ಷದಿಂದ ಪಕ್ಷಕ್ಕೆ ಹಾರುವುದು ಹೊಸತೇನಲ್ಲ.. ಇಂದು ಈ ಪಕ್ಷದಲ್ಲಿ ಇದ್ದವರು, ನಾಳೆ ಇನ್ನೊಂದು ಪಕ್ಷದಲ್ಲಿ ಇರುತ್ತಾರೆ.. ರಾಜಕೀಯ ವಲಯದಲ್ಲಿ ಸಾಕಷ್ಟು ಮಾತುಗಳು ಕೇಳಿ ಬರುತ್ತಿವೆ, ಆಪರೇಷನ್ ಕಮಲದ ಬೀತಿ ಹೆಚ್ಚಾಗಿ ಕಂಡು ಬರುತ್ತಿದ್ದು, ನೆನ್ನೆಯಷ್ಟೆ ಅದಕ್ಕೆಲ್ಲಾ ತೆರೆ ಎಳೆದಿದೆ.. ಇದರ ನಡುವೆ ನಾವು ಯಾವುದೇ ಆಪರೇಷನ್ ಕಮಲ ಮಾಡಿಲ್ಲ. ನಮ್ಮ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಹಾಗೂ ಜೆಡಿಎಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಬಿಎಸ್ ವೈ ಮಾಧ್ಯಮದವರೊಂದಿಗೆ ಮಾತನಾಡಿ, ನಾವು ಯಾವುದೇ ರೀತಿಯ ಆಪರೇಷನ್ ಕಮಲ ಮಾಡಿಲ್ಲ. ಕಾಂಗ್ರೆಸ್ ನವರೇ ಬಿಜೆಪಿ ಶಾಸಕರ ಜೊತೆ ಸಂಪರ್ಕದಲ್ಲಿರುವುದಾಗಿ ಒಪ್ಪಿಕೊಂಡಿದ್ದಾರೆ. ಸ್ವತಃ ಸಿಎಂ ಕುಮಾರಸ್ವಾಮಿಯವರೇ ನಮ್ಮ ಪಕ್ಷದ ಶಾಸಕನಿಗೆ ಮಂತ್ರಿ ಮಾಡುತ್ತೇನೆ, ದುಡ್ಡು ಕೊಡುತ್ತೇವೆ ಎಂದು ಹೇಳಿದ್ದಾರೆ ಎಂದು ಆರೋಪ ಮಾಡಿದರು.. ಬಿಜೆಪಿಯ ಎಲ್ಲಾ ಶಾಸಕರು ಒಟ್ಟಾಗಿದ್ದು, ಮುಂದಿನ ಲೋಕಸಭೆ ಚುನಾವಣೆಯ ಬಗ್ಗೆ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದೇವೆ ಎಂದರು.. . ಆ ಕಾರಣಕ್ಕೆ ನಮ್ಮ ಎಲ್ಲಾ ಶಾಸಕರನ್ನು ರೆಸಾರ್ಟ್ ಗೆ ಕರೆದುಕೊಂಡು ಹೋಗಲಾಗಿತ್ತು. ಅದಕ್ಕೆ ಬೇರಾವುದೇ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ...
Comments