ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಕಂಪ್ಲಿ ಶಾಸಕ ಗಣೇಶ್ ಅಮಾನತು

ರಾಜಕೀಯ ವಲಯದಲ್ಲಿ ಸಾಕಷ್ಟು ಕಿತ್ತಾಟಗಳು ಒಳಜಗಳಗಳು ನಡೆಯುತ್ತಿದ್ದವು.. ಆದರೆ ಇದೀಗ ಆ ಜಗಳಗಳು ಹೊಡೆದಾಟಗಳು ಎಲ್ಲವೂ ಕೂಡ ಬಹಿರಂಗವಾಗಿಯೇ ನಡೆಯುತ್ತಿವೆ… ಆಪರೇಷನ್ ಕಮಲದ ಆತಂಕದ ಹಿನ್ನೆಲೆಯಲ್ಲಿ ರೆಸಾರ್ಟ್ ಸೇರಿದ್ದ ಕಾಂಗ್ರೆಸ್ ಶಾಸಕರು ಗಲಾಟೆ ಮಾಡಿಕೊಂಡ ಹಿನ್ನೆಲೆಯಲ್ಲಿಯೇ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಅವರನ್ನು ಅಮಾನತು ಮಾಡಿ ಎಂಬ ಆದೇಶವನ್ನು ಹೊರಡಿಸಲಾಗಿದೆ.
ಅದಷ್ಟೆ ಅಲ್ಲದೇ ಶತಾಯುಷಿಯಾದ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರೆಸಾರ್ಟ್ ರಾಜಕೀಯಕ್ಕೆ ವಿದಾಯ ಹೇಳಿ ಕೈ ನಾಯಕರು ತಮ್ಮ ಶಾಸಕರನ್ನು ಆತಂಕದಲ್ಲಿಯೇ ಕ್ಷೇತ್ರಗಳಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಭಾನುವಾರವಷ್ಟೆ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿರುವ ವಿಜಯನಗರ ಶಾಸಕ ಆನಂದ್ ಸಿಂಗ್ ಅವರಿಗೆ ಕಣ್ಣಿಗೆ ಆಗಿರುವ ಗಾಯವಾಗಿದ್ದು ಕಣ್ಣು ಊದಿಕೊಂಡಿದ್ದು, ಅವರಿಗೆ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಇದರ ಬೆನ್ನಲ್ಲೇ ಕಂಪ್ಲಿ ಶಾಸಕ ಗಣೇಶ್ ಐಪಿಸಿ ಸೆಕ್ಸನ್ 323, 324, 307 ,504, 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ವೈ ಘೋರ್ಪಡೆ, ಶಾಸಕ ಗಣೇಶ್ ಅವರ ಅಮಾನತು ಆದೇಶ ಹೊರಡಿಸಿದ್ದಾರೆ. ಘಟನೆಯ ಬಗ್ಗೆ ಆನಂದ್ ಸಿಂಗ್ ಗಂಭೀರ ಆರೋಪ ಮಾಡಿರುವ ಕಾರಣ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆದೇಶದ ಮೇರೆಗೆ ಜೆ.ಎನ್. ಗಣೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. .
Comments