ಲೋಕಸಭಾ ಚುನಾವಣೆಯ ಅಖಾಡಕ್ಕೆ ಇಳಿಯುವ ಬಗ್ಗೆ ಮಾಜಿ ಸಿಎಂ ಸಿದ್ದು ಹೇಳಿದ್ದೇನು..?
ರಾಜಕೀಯ ವಲಯದಲ್ಲಿ ಲೋಕಸಭಾ ಚುನಾವಣೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ…ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ರಾಜ್ಯ ರಾಜಕಾರಣಕ್ಕೆ ಸೀಮಿತವಾಗಿದ್ದು, ಯಾವುದೇ ಕಾರಣಕ್ಕೂ ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿದ್ಧರಾಮಯ್ಯ ಅವರು ಇಂದು ಇಳಕಲ್ನಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದರು, ಇದೇ ಸಂದರ್ಭದಲ್ಲಿ ಮಾತನಾಡುತ್ತ ನಾನು ರಾಜ್ಯ ರಾಜಕಾರಣಕ್ಕೆ ಸೀಮಿತವಾಗಿದ್ದು, ಯಾವುದೇ ಕಾರಣಕ್ಕೂ ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ಅಲ್ಲಿ ನಿಲ್ಲುತ್ತೇನೆ, ಇಲ್ಲಿ ನಿಲ್ಲುತ್ತೇನೆ ಎಂಬುದೆಲ್ಲಾ ಸುಳ್ಳು ನಾನು ಎಲ್ಲಿಂದಲೂ ಸ್ಪರ್ಧಿಸುವುದಿಲ್ಲ ಅಂತ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇನ್ನು ಆನಂದ ಸಿಂಗ್ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿ ಆನಂದ್ ಸಿಂಗ್ ಅವರು ದೂರು ಕೊಟ್ಟಿದ್ದಾರೆ. ಗಣೇಶ್ ವಿರುದ್ಧ 307,506 ಅಡಿ ಪ್ರಕರಣ ದಾಖಲಾಗಿದೆ ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ತಾರೆ ಅಂತ ತಿಳಿಸಿದ್ದಾರೆ.
Comments