ಬಿಗ್ ಬ್ರೇಕಿಂಗ್: ಲೋಕಸಭೆ ಅಖಾಡಕ್ಕೆ ಸುಮಲತಾ ಅಂಬರೀಶ್ ಸ್ವತಂತ್ರ ಅಭ್ಯರ್ಥಿ ..? ಯಾವ ಕ್ಷೇತ್ರದಿಂದ ಗೊತ್ತಾ?

ಲೋಕಸಭಾ ಚುನಾವಣೆಯು ದಿನದಿಂದ ದಿನಕ್ಕೆ ರಂಗೇರುತ್ತಿದೆ... ಅದರಲ್ಲೂ ಮಂಡ್ಯ ಲೋಕಸಭಾ ಚುನಾವಣೆಯ ಕಾವು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ… ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ದಿವಂಗತ ಅಂಬರೀಶ್ ಪತ್ನಿ ಸುಮಲತಾ ಈಗಾಗಲೇ ಎಲ್ಲಾ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ…ಕಾಂಗ್ರೆಸ್ ಜೆಡಿಎಸ್ ಎರಡೂ ಪಕ್ಷಗಳಿಂದ ಸುಮಲತಾ ಅವರು ಸ್ಪರ್ಧೆಮಾಡುವುದಿಲ್ಲ ಎನ್ನಲಾಗುತ್ತಿತ್ತು. ಮಂಡ್ಯ ಲೋಕಸಭೆ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧೆ ಮಾಡುವ ಕುರಿತು ತಯಾರಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಅಂಬರೀಶ್ ನಿಧನದ ನಂತರ ಮಂಡ್ಯದ ಜನತೆ ಬೇಸರವಾಗಿದ್ದಾರೆ.. ಈಗಾಗಲೇ ಬಹುಕಾಲದಿಂದ ಅಂಬರೀಶ್ ಕಾಂಗ್ರೆಸ್ ನಲ್ಲಿದ್ದರೂ. ಸುಮಲತಾ ಮಾತ್ರ ಕಾಂಗ್ರೆಸ್ ನಿಂದ ಸ್ಪರ್ಧೆಗೆ ಇಳಿಯುವುತ್ತಿಲ್ಲ. ಇನ್ನೂ ಜೆಡಿಎಸ್ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದಲೂ ಸ್ಪರ್ಧೆಗೆ ಇಳಿಯದಿರುವುದು ಸಮ್ಮಿಶ್ರ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದೆ ಎನ್ನಲಾಗಿದೆ. ಪತಿ ಅಂಬರೀಶ್ ಅವರಿಗಿದ್ದ ಜನಪ್ರಿಯತೆಯನ್ನು ನೆಚ್ಚಿಕೊಂಡು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದು ಸುಮಲತಾ ಅವರ ಆಲೋಚನೆ, ಅವರಿಗೆ ಬೆಂಬಲವಾಗಿ ನಿಲ್ಲಲು ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವರು ಸ್ಪರ್ಧೆ ಮಾಡುವಂತೆ ಒತ್ತಡ ಹಾಕಿದ್ದಾರೆ. ಈ ಪ್ರಸ್ತಾಪವನ್ನು ಸುಮಲತಾ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.. ಒಂದು ವೇಳೆ ಸುಮಲತ ಅಂಬರೀಶ್ ರಾಜಕೀಯಕ್ಕೆ ಎಂಟ್ರಿ ಕೊಟ್ರೆ ಗೆಲುವು ಕಟ್ಟಿಟ್ಟ ಬುತ್ತಿ ಅನ್ನೋದು ಕೆಲವರ ಅನಿಸಿಕೆ..
Comments