ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಚುನಾವಣ ಅಖಾಡಕ್ಕೆ....! ಯಾವ ಪಕ್ಷ ಗೊತ್ತಾ..?
ಮುಂಬರುವ ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ ರೀತಿಯ ಸಿದ್ದತೆಗಳು ಕೂಡ ನಡೆಯುತ್ತಿವೆ.. ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ.. ಅದರಲ್ಲೂ ಮಂಡ್ಯ ಲೋಕಸಭಾ ಚುನಾವಣೆಯ ಕಾವು ರಂಗೇರುತ್ತಿದೆ.. ಅಖಾಡಕ್ಕೆ ಯಾರು ಇಳಿಯುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಕೂಡ ಮೂಡಿದೆ.. ಜೆಡಿಎಸ್ ಭದ್ರಕೋಟೆ ಎನ್ನಿಸಿಕೊಂಡಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದಿವಂಗತ ನಟ, ರಾಜಕಾರಣಿ ಅಂಬರೀಷ್ ಅವರ ಪತ್ನಿ ಸುಮಲತಾ ಅಂಬರೀಷ್ ಅವರನ್ನು ಕಣಕ್ಕಿಳಿಸಬೇಕೆಂದು ಮಂಡ್ಯ ಸ್ಥಳೀಯ ಕಾಂಗ್ರೆಸ್ ನಾಯಕರು ಒತ್ತಾಯ ಮಾಡಿದ್ದಾರೆ.
ಇದೀಗ ಚುನಾವಣ ಅಖಾಡಕ್ಕೆ ಇಳಿಯಲು ಸುಮಲತಾ ಅವರು ಕೂಡ ಒಲವು ಹೊಂದಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದ್ದು, ಜೆಡಿಎಸ್ ಈ ಕ್ಷೇತ್ರವನ್ನು ಸುಮಲತಾ ಅವರಿಗೆ ಬಿಟ್ಟುಕೊಡುವುದೇ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಮಂಡ್ಯ ಹಾಗೂ ಹಾಸನದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸಮ ಬಲದ ಪೈಪೋಟಿ ಇದೆ. ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಪ್ರಬಲ ನೆಲೆ ಇದ್ದು, ಕಾಂಗ್ರೆಸ್‌ನ ನೇರ ಸ್ಪರ್ಧಿ ಜೆಡಿಎಸ್. ಹೀಗಾಗಿ ಪಕ್ಷ ಉಳಿಯಲು ಎರಡು ಕ್ಷೇತ್ರದಲ್ಲಿ ಒಂದು ಕ್ಷೇತ್ರವನ್ನು ಕಾಂಗ್ರೆಸ್ ತನ್ನ ಬಳಿಯೇ ಉಳಿಸಿಕೊಳ್ಳಬೇಕು. ಒಂದು ವೇಳೆ ಮಂಡ್ಯ ಕ್ಷೇತ್ರವು ಕಾಂಗ್ರೆಸ್ ಪಾಲಿಗೆ ಬಂದರೆ ಸುಮಲತಾ ಅಂಬರೀಷ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕು ಎಂಬ ವಾದ ಮುಂದಿಟ್ಟಿದ್ದಾರೆ. ಒಟ್ಟಾರೆ ಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕೆ ಇಳಿದರೆ ಗೆಲ್ಲುವುದು ಖಚಿತ ಅನ್ನೋದು ಎಲ್ಲರಿಗೂ ಕೂಡ ಗೊತ್ತಿರುವ ವಿಷಯವೇ…
Comments