ಮಂಡ್ಯದಿಂದ ಅಖಾಡಕ್ಕಿಳಿಯುತ್ತಿರುವ ಸ್ಪರ್ಧಿಗೆ ‘ದರ್ಶನ್’ ಬೆಂಬಲ..!! ಹಾಗಾದ್ರೆ ಅಖಾಡಕ್ಕೆ ಯಾರು..?

ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿ ಕುತೂಹಲದ ಅಖಾಡವಾಗಿರೊದಂತು ಸುಳ್ಳಲ್ಲ.. ಒಂದು ಕಡೆ ಶಿವರಾಮೇಗೌಡ ಅವರು ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಮತ್ತೊಂದು ಕಡೆ ಈ ಕ್ಷೇತ್ರದಲ್ಲಿ ನಿಖಿಲ್ ಕುಮಾರ್ ಅವರನ್ನು ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ. ಈ ಸಮಯದಲ್ಲಿ ಕಾಂಗ್ರೆಸ್’ನಲ್ಲಿ ಮಂಡ್ಯ ಕ್ಷೇತ್ರದ ಕುರಿತಾಗಿ ಗೊಂದಲ ಪ್ರಾರಂಭವಾಗಿದೆ…ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಲಿವೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ಜೆಡಿಎಸ್ ನಾಯಕರು ಒತ್ತಾಯ ಮಾಡಿದ್ದಾರೆ.
ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್’ನಿಂದ ಕಣಕ್ಕಿಳಿಯಲು ಚಿಂತನೆಯನ್ನು ನಡೆಸಿದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಂಬರೀಶ್ ಅಭಿಮಾನಿಗಳು ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸುಮಲತಾ ಅಂಬರೀಶ್ ಅವರಿಗೆ ಒತ್ತಾಯ ಮಾಡಿದ್ದಾರೆ. ಬಿಜೆಪಿ ಕೂಡ ಸುಮಲತಾ ಅಂಬರೀಶ್ ಅವರನ್ನು ಕಣಕ್ಕಿಳಿಸಲು ಆಸಕ್ತಿ ತೋರಿದೆ ಎಂದು ಹೇಳಲಾಗುತ್ತಿದೆ.. ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡಿರುವ ನಟ ದರ್ಶನ್, ಈ ಕುರಿತಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ.. ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಬೇಕು. ತಾವು ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಮಂಡ್ಯ ಕ್ಷೇತ್ರದಲ್ಲಿ ಪ್ರಚಾರ ನಡೆಸುವುದಾಗಿ ದರ್ಶನ್ ಸುತ್ತೂರು ಜಾತ್ರೆಯಲ್ಲಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.. ಒಟ್ಟಾರೆಯಾಗಿ ಸುಮಲತ ರಾಜಕೀಯದ ಕಡೆ ಒಲವು ತೋರಿಸಿದರೆ ಯಾವ ಪಕ್ಷದಿಂದ ಅಖಾಡಕ್ಕೆ ಇಳಿಯುತ್ತಾರೆ ಎಂಬುದು ಇನ್ನು ಗೊಂದಲವಾಗಿದೆ.
Comments