‘ದೋಸ್ತಿ’ ಸರ್ಕಾರದ ನಾಯಕನಿಗೆ ಬಿಜೆಪಿ 50 ಕೊಟಿ ಆಫರ್..! ಮಾಜಿ ಸಿಎಂ ಸಿದ್ದರಾಮಯ್ಯ ಸಿಡಿಸಿದ್ರು ಹೊಸ ಬಾಂಬ್..!!!

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ವಲಯದಲ್ಲಿ ಬಾರೀ ಸಂಚಲನ ಮೂಡುತ್ತಿದೆ..ಕಾಂಗ್ರೆಸ್ ‘ನ ಒಬ್ಬ ಶಾಸಕನಿಗೆ ಬಿಜೆಪಿ 50 ಕೋಟಿ ರೂ. ಆಫರ್ ನೀಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾಂಗ್ರೆಸ್ ಶಾಸಕನಿಗೆ 50 ಕೋಟಿ ರೂ. ನೀಡಲು ಇಷ್ಟು ಹಣ ಎಲ್ಲಿಂದ ಬಂತು? ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಬಂಗಾಳದಲ್ಲಿ ಸಿಬಿಐಅನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಇದನ್ನು ಮಮತಾ ಬ್ಯಾನರ್ಜಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ನಾನು ಬೆಂಬಲಿಸುತ್ತೇನೆ ಎಂದರು. ಇನ್ನು ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ಜಿಲ್ಲೆಯ ಮುಖಂಡರು ಒತ್ತಾಯಿಸುತ್ತಿದ್ದಾರೆ. ಆದರೆ ಈ ವರೆಗೂ ಕಾಂಗ್ರೆಸ್ ಮತ್ತು ಜೆಡಿಎಸ್ ಕ್ಷೇತ್ರ ಹಂಚಿಕೆ ಕುರಿತು ತೀರ್ಮಾನ ತೆಗೆದುಕೊಂಡಿಲ್ಲ. ನಾನಂತೂ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಒಟ್ಟಾರೆಯಾಗಿ ಬಿಜೆಪಿಯು ಮೈತ್ರಿ ಸರ್ಕಾರದ ವಿರುದ್ದ ಮಸಲತ್ತು ನಡೆಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
Comments