ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಜೆಟ್ ಮಂಡನೆಯ ನಿರೀಕ್ಷೆಗಳೇನು..?

ಈಗಾಗಲೇ ಮೊದಲೇ ತಿಳಿಸಿರುವಂತೆ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಬಜೆಟ್ ಇಂದು ಮಂಡನೆಯಾಗಲಿದೆ, ಲೋಕಸಭೆ ಚುನಾವಣೆಯ ಸಮಯದಲ್ಲಿ ಜನರ ಮನಗೆಲ್ಲಲು ಮೈತ್ರಿ ಸರ್ಕಾರಕ್ಕೆ ಈಗ ಮಂಡಿಸುವ ಬಜೆಟ್ ತುಂಬಾ ಮುಖ್ಯವಾಗಿದೆ. ಪ್ರತಿಪಕ್ಷವಾದ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಕೂಡ ಇಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಮಧ್ಯಾಹ್ನ 12.30 ಕ್ಕೆ ಬಜೆಟ್ ಮಂಡಿಸಲಿದ್ದಾರೆ.
ಮುಖ್ಯವಾಗಿ ಬಜೆಟ್ ನಲ್ಲಿ ರೈತರಿಗೆ ವಿಶೇಷ ಕೊಡುಗೆಯನ್ನು ನೀಡುತ್ತಾರೆ ಎಂದು ನಿರೀಕ್ಷಿಸಲಾಗಿದೆ. ಕಳೆದ ಬಾರಿಯ 2.18 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಂತಹ ಸಿಎಂ ಕುಮಾರಸ್ವಾಮಿ, ಈ ಬಾರಿ 2.40 ಲಕ್ಷ ಕೋಟಿ ರೂ.ಗೆ ಏರಿಸುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ. ಬಜೆಟ್ ನಲ್ಲಿ ರೈತರ ಬೆಳೆ ಸಾಲ ಮನ್ನಾ ಯೋಜನೆಗೆ ಹೆಚ್ಚಿನ ಹಣ ನಿಗದಿಪಡಿಸುವುದು, ರಾಷ್ಟ್ರೀಕೃತ ಬ್ಯಾಂಕ್ ನಲ್ಲಿರುವ ರೈತರ ಸಾಲ ಮನ್ನಾದ ಕುರಿತು ಪ್ರಕಟಿಸಲಿದ್ದಾರೆ. ಕೃಷಿಗೆ ಆದ್ಯತೆ ನೀಡಲಾಗುತ್ತದೆ. ಜೊತೆಗೆ ಕಡು ಬಡವರಿಗೆ ಅನುಕೂಲವಾಗುವಂತ `ದೀನಬಂಧು' ಎಂಬ ಹೊಸ ಯೋಜನೆಯನ್ನು ಘೋಷಿಸುತ ಸಾಧ್ಯತೆ ಇದೆ.ಅಷ್ಟೆ ಅಲ್ಲದೆ ವಿದ್ಯಾರ್ಥಿಗಳಿಗೂ ಕೂಡ ಈ ಬಾರಿಯ ಬಜೆಟ್’ನಲ್ಲಿ ಒಂದಿಷ್ಟು ಯೋಜನೆಗಳನ್ನು ಕೊಡಬಹುದು ಎಂದು ನಿರೀಕ್ಷೀಸಲಾಗಿದೆ.. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದರೆ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿಗಳು ಈ ರೀತಿ ಮಾಡುತ್ತಿದ್ದಾರೆ ಎಂಬ ಮಾತು ವಿರೋಧ ಪಕ್ಷದವರದ್ದಾಗಿದೆ.
Comments