ಕೊನೆಗೂ ಸುಮಲತಾ ಅಂಬರೀಶ್ ಲೋಕಸಭಾ ಚುನಾವಣೆ ಅಖಾಡಕ್ಕೆ ಸ್ಪಷ್ಟನೆ..! ಯಾವ ಕ್ಷೇತ್ರ ಗೊತ್ತಾ..?

ಮುಂಬರುವ ಲೋಕಸಭಾ ಚುನಾವಣೆಗೆ ಈಗಾಗಲೇ ಸಕಲ ಸಿದ್ದತೆಗಳನ್ನು ಎಲ್ಲಾ ಪಕ್ಷಗಳು ಮಾಡಿಕೊಳ್ಳುತ್ತಿವೆ… ಲೋಕಸಭಾ ಚುನಾವಣೆ ಅದರ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ..ಅದರಲ್ಲೂ ಮಂಡ್ಯದ ಚುನಾವಣೆಯ ಕಾವು ಮಾತ್ರ ರಂಗೇರುತ್ತಿದೆ.. ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಕ್ಕರೆನಾಡು ಮಂಡ್ಯ ಟಿಕೆಟ್ ಯಾರಿಗೆ ಎನ್ನುವುದು ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚು ಚರ್ಚೆ ನಡೆಯುತ್ತಿದೆ.
ಸುಮಲತಾ ಅವರಿಗೆ ಟಿಕೆಟ್ ಕೊಡಲು ಅಂಬರೀಶ್ ಅಭಿಮಾನಿಗಳ ಒತ್ತಾಯ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಹೇಳುತ್ತಿದ್ದಾರೆ. ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದು, ಈ ಮೂಲಕ ಜೆಡಿಎಸ್ ಗೆ ಶಾಕ್ ಕೊಟ್ಟಿದ್ದಾರೆ. ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಸುಮಲತಾ ಅಂಬರೀಶ್, ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದರು. ನಾನು ಯಾವುದೇ ರಾಜಕೀಯ ಪಕ್ಷದಲ್ಲಿ ಗುರ್ತಿಸಿಕೊಂಡಿಲ್ಲ. ಅಂಬರೀಶ್ ಅವರು ಕಾಂಗ್ರೆಸ್ನಿಂದಲೇ ಗುರುತಿಸಿಕೊಂಡಿದ್ದರು, ಆದ್ದರಿಂದ ಕಾಂಗ್ರೆಸ್ ಪಕ್ಷದಿಂದಲೇ ಟಿಕೆಟ್ ಎದುರು ನೋಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು. ಒಟ್ಟಾರೆಯಾಗಿ ಸುಮಲತಾ ರಾಜಕೀಯ ಪ್ರವೇಶ ಮಾಡುವುದನ್ನು ಖಚಿತ ಪಡಿಸಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿದಂತಾಗಿದೆ.
Comments