ಬಿಗ್ ಬ್ರೇಕಿಂಗ್ : ರಾಜ್ಯಕ್ಕೆ ಎಂಟ್ರಿ ಕೊಡುತ್ತಿದೆ ಮತ್ತೊಂದು ರಾಜಕೀಯ ಪಕ್ಷ..!! ಯಾವುದು ಗೊತ್ತಾ..?
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಎಲ್ಲಾ ಪಕ್ಷದವರು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ…ಆದರೆ ಈಗಿರುವಾಗ ಈ ಪಕ್ಷಗಳ ಜೊತೆಗೆ ಮತ್ತೊಂದು ಪಕ್ಷ ರಾಜ್ಯಕ್ಕೆ ಎಂಟ್ರಿ ಕೊಡ್ತಿದೆ.. ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ, ಇದೀಗ ರಾಜ್ಯದಲ್ಲಿ ಮತ್ತೊಂದು ಹೊಸ ರಾಜಕೀಯ ಪಕ್ಷ ಅಸ್ತಿತ್ವಕ್ಕೆ ಬಂದಿದೆ. ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾರೆಡ್ಡಿ ಅವರು `ಕರ್ನಾಟಕ ಜನತಾ ರಂಗ' ಎಂಬ ಹೊಸ ಪಕ್ಷವನ್ನು ಸ್ಥಾಪನೆ ಮಾಡಿದ್ದಾರೆ.
ರಾಜ್ಯದ ಜನತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಿಂದ ಬೇಸತ್ತು ಹೋಗಿರುವ ಹಿನ್ನೆಲೆಯಲ್ಲಿ ಪರ್ಯಾಯ ರಾಜಕಾರಣಕ್ಕಾಗಿ ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದೇವೆ ಎಂದು ರವಿಕೃಷ್ಣಾ ರೆಡ್ಡಿಯವರು ತಿಳಿಸಿದ್ದಾರೆ. ಕರ್ನಾಟಕ ಜನತಾ ರಂಗ ಪಕ್ಷದಿಂದ ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದ 28 ಲೋಕಸಭಾ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಭ್ರಷ್ಟಾಚಾರ, ಸೃಜನ ಪಕ್ಷಪಾತ ಹಾಗೂ ಕುಟಿಲ ರಾಜಕೀಯದಲ್ಲಿ ಮುಳುಗಿ ಹೋಗಿವೆ. ಹಾಗಾಗಿ ಕೆಲವು ಸಮಾನ ಮನಸ್ಕರರು ಸೇರಿಕೊಂಡು ಪರ್ಯಾಯ ಪಕ್ಷ ಸ್ಥಾಪನೆಗೆ ಮುಂದಾಗಿದ್ದೇವೆ ಎಂದು ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ಇರೋ ಪಕ್ಷಗಳ ಜೊತೆಗೆ ಮತ್ತೊಂದು ಪಕ್ಷ ಸೇರಿಕೊಂಡರೆ ಸ್ಪರ್ಧೆ ಮತ್ತಷ್ಟು ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ..
Comments