ಸುಮಲತಾ ಅಂಬರೀಶ್ ಗೆ 'ಬಿಗ್ ಶಾಕ್'..!? ಈ ಬಗ್ಗೆ ಜೆಡಿಎಸ್ ನಿಲುವೇನು..?

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ಸೆಂಟರ್ ಆಫ್ ಅಟ್ರಾಕ್ಷನ್ ಆಗಿದೆ ಅಂದರೆ ನಿಜ್ಕಕೂ ತಪ್ಪಾಗುವುದಿಲ್ಲ....ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರ ಸ್ಪರ್ಧೆಯ ವಿಚಾರವಾಗಿ ಕಾಂಗ್ರೆಸ್ ನಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದರು.. ಆದರೆ ನನ್ನ ಪತಿ ಅಂಬರೀಶ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಇದ್ದರು ಹಾಗಾಗಿ ನಾನೂ ಕೂಡ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸಲು ಮೊದಲ ಆದ್ಯತೆ ನೀಡುವುದಾಗಿ ಸುಮಲತಾ ತಿಳಿಸಿದ್ದರು. ಒಂದು ವೇಳೆ ರಾಜಕೀಯಕ್ಕೆ ಬಂದರೆ ಮಂಡ್ಯದಿಂದ ಮಾತ್ರ ಎಂದು ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಸಂಸತ್ ಚುನಾವಣೆಯಲ್ಲಿ ಮೈತ್ರಿಯಾಗಲಿದ್ದು, ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವುದು ಬಹುತೇಕ ಖಚಿತ ಎನ್ನಲಾಗಿದೆ. ಮಂಡ್ಯ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆ ಇದೆ. ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಅಂಬರೀಶ್ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸುಮಲತಾ ಅಂಬರೀಶ್ ಅವರಿಗೆ ಒತ್ತಾಯ ಮಾಡಿದ್ದಾರೆ. ಆದರೆ ಈ ವಿಷಯದ ಬಗ್ಗೆ ಸಿಎಂ ಕುಮಾರಸ್ವಾಮಿಯವರ ನಿಲುವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ..
Comments