ಕಾಂಗ್ರೇಸ್’ನ ಪ್ರಭಾವಿ ಶಾಸಕ ರಾಜೀನಾಮೆ..!? ಯಾರು ಗೊತ್ತಾ..?
ದೋಸ್ತಿ ಸರ್ಕಾರ ರಚನೆಯಾದ ದಿನದಿಂದಲೂ ಕೂಡ ಸಮ್ಮಿಶ್ರ ಸರ್ಕಾರಕ್ಕೆ ಒಂದಲ್ಲ ಒಂದು ವಿಘ್ನಗಳು ಎದುರಾಗುತ್ತಿವೆ..ಅತೃಪ್ತ ಶಾಸಕರನ್ನು ಸೆಳೆಯಲು ಬಿಜೆಪಿಯವರು ಆಪರೇಷನ್ ಕಮಲ ಶುರುಮಾಡಿಕೊಂಡಿದ್ದಾರೆ..ಇದೀಗ ಇದರ ನಡುವೆ ಕಾಂಗ್ರೆಸ್ ನ ಅತೃಪ್ತ ಚಿಂಚೋಳಿ ಶಾಸಕ ಡಾ. ಉಮೇಶ್ ಜಾಧವ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಸತತ ಗೈರು ಹಾಜರಾಗುವುದರ ಜೊತೆಗೆ ಬಜೆಟ್ ಅಧಿವೇಶನಕ್ಕೂ ಬಾರದೆ, ಕಾಂಗ್ರೆಸ್ ನಿಂದ ಅಧಿಕೃತವಾಗಿ ಹೊರಬರಲು ನಿರ್ಧರಿಸಿರುವ ಜಾಧವ್, ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.ಇದರ ನಡುವೆ ಕೈ ಶಾಸಕರಾದ ರಮೇಶ್ ಜಾರಕಿಹೊಳಿ, ಡಾ.ಉಮೇಶ್ ಜಾಧವ್, ಬಿ.ನಾಗೇಂದ್ರ, ಮಹೇಶ್ ಕಮಟಳ್ಳಿ ಅವರನ್ನು ಶಾಸನಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ಕೋರಿ ಕಾಂಗ್ರೆಸ್ ನಾಯಕರು ಸ್ಪೀಕರ್ ಅವರಿಗೆ ದೂರು ಸಲ್ಲಿಸಿದ್ದಾರೆ. ಆದರೆ ಅತೃಪ್ತರಿಗೆ ಮತ್ತೊಂದು ಅವಕಾಶ ನೀಡಲು ಉದ್ದೇಶಿಸಿರುವ ಕಾಂಗ್ರೆಸ್ ನಾಯಕರು ಬಜೆಟ್ ಅಧಿವೇಶನಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.. ಒಟ್ಟಾರೆಯಾಗಿ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಯಾರು ಯಾವ ಪಕ್ಷದಲ್ಲಿ ಇರುತ್ತಾರೆ ಎಂಬುದು ತಿಳಿಯುವುದಿಲ್ಲ.. ಇದರ ನಡುವೆ ಆಪರೇಷನ್ ಕಮಲ ಮಾಡುವುದನ್ನು ಕೂಡ ಬಿಡುವುದಿಲ್ಲ..
Comments