ಮೊಮ್ಮಗನಿಗೆ ಹಾಸನ ಕ್ಷೇತ್ರ..! ಗೌಡರಿಗೆ ಯಾವ ಕ್ಷೇತ್ರ ..!! ಏನಿದು ಹೊಸ ಟ್ರಿಕ್ಸ್..?
ಮುಂಬರುವ ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷದವರು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಜೆಡಿಎಸ್ ತಮ್ಮ ಹಾಸನ ಲೋಕಸಭಾ ಕ್ಷೇತ್ರವನ್ನು ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಡುತ್ತಿದ್ದಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪರ್ಧೆ ಎಲ್ಲಿಂದ ಎಂಬ ಯಕ್ಷಪ್ರಶ್ನೆ ಮೂಡಿದೆ. ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೋ ಇಲ್ಲವೋ ಎಂದು ಹೇಳಿಕೆ ನೀಡುವ ಮೂಲಕ ದೇವೇಗೌಡರು, ರಾಜಕೀಯ ನಿವೃತ್ತಿ ಪಡೆದುಕೊಳ್ಳಲಿದ್ದಾರೆಯೇ ಎಂಬ ಮಾತುಗಳು ಕೇಳಿ ಬರುತ್ತಿವೆ..
ಪ್ರಜ್ವಲ್ ರೇವಣ್ಣ ಅವರನ್ನು ಹಾಸನದಿಂದ ಅಖಾಡಕ್ಕೆ ಇಳಿಸಿ ದೆಹಲಿಗೆ ಕಳುಹಿಸುವ ಅಭಿಲಾಷೆ ಹೊಂದಿರುವ ದೇವೇಗೌಡರು ಪಕ್ಷದ ಅಸ್ತಿತ್ವಕ್ಕಾಗಿ ತಾವು ಅಖಾಡಕ್ಕೆ ಇಳಿಯುವ ಆಸೆ ಹೊಂದಿದ್ದಾರೆ ಎನ್ನಲಾಗುತ್ತಿದೆ.. ಆದರೆ, ಈಗಾಗಲೇ ಹಾಸನ ಕ್ಷೇತ್ರದಿಂದ ಪ್ರಜ್ವಲ್‌ರನ್ನು ಅಖಾಡಕ್ಕಿಳಿಸುವುದಾಗಿ ತಿಳಿಸಿದ್ದಾರೆ... ಹಾಸನ ಕ್ಷೇತ್ರವನ್ನು ಬಿಟ್ಟುಕೊಟ್ಟಬಳಿಕ ತಮ್ಮ ಕ್ಷೇತ್ರ ಯಾವುದು ಎಂಬ ಗೊಂದಲದಲ್ಲಿದ್ದಾರೆ.. ಮಂಡ್ಯ, ಬೆಂಗಳೂರು ಉತ್ತರ ಕ್ಷೇತ್ರದಿಂದ ದೇವೇಗೌಡರು ಸ್ಪರ್ಧಿಸುವ ಸಾಧ್ಯತೆ ಇವೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾಂಗ್ರೆಸ್‌ನ ಸಹಮತ ಇದೆಯೇ ಎಂಬ ಪ್ರಶ್ನೆಯೂ ಎದುರಾಗಿದೆ. ಒಟ್ಟಾರೆಯಾಗಿ ಗೌಡರು ಯಾವ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
Comments