ಬಿಜೆಪಿಗೆ ಮುಖಭಂಗ: ‘ಕಮಲ’ಕ್ಕೆ ಕೈ ಕೊಟ್ಟ ಶಾಸಕರು..!! ಯಾರ್ ಗೊತ್ತಾ..?
ಅಸ್ತಿತ್ವದಲ್ಲಿರುವ ದೋಸ್ತಿ ಸರ್ಕಾರವನ್ನು ಉರುಳಿಸಲು ವಿರೋಧ ಪಕ್ಷಗಳು ಸಾಕಷ್ಟು ಕೆಲಸಗಳನ್ನು ಮಾಡುತ್ತಿವೆ. ಅತೃಪ್ತ ಶಾಸಕರನ್ನು ಸೆಳೆಯುವುದು, ಆಡಿಯೊ ಸಿಡಿಗಳನ್ನು ಬಿಡುಗಡೆ ಮಾಡುವುದು ಈ ರೀತಿಯ ಕೆಲಸಗಳನ್ನು ಮಾಡುತ್ತಿದೆ..ಆದರೂ ಕೂಡ ಆಪರೇಷನ್ ಕಮಲ ಯಾಕೋ ಯಶಸ್ವಿಯಾಗುತ್ತಿಲ್ಲ… ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೆ ಬಂದೇ ಬಿಟ್ಟಿತು ಎಂಬ ಉತ್ಸಾಹದಲ್ಲಿದ್ದ ಬಿಜೆಪಿ ನಾಯಕರಿಗೆ ಯಡಿಯೂರಪ್ಪನವರ ಆಡಿಯೋ ಟೇಪ್ ಬಹಿರಂಗಗೊಂಡು ತೀವ್ರ ಮುಖಭಂಗವಾಗಿದೆ. ಸದ್ಯಕ್ಕೆ ಈ ಪ್ರಕರಣದಿಂದ ಹೊರ ಬಂದರೆ ಸಾಕು ಎಂಬ ಎಂಬಂತೆ ಆಗಿದೆ..
ಅಷ್ಟೆ ಅಲ್ಲದೆ ಕಳೆದ ಒಂದು ತಿಂಗಳಿನಿಂದ ಮುಂಬೈನಲ್ಲಿದ್ದ ನಾಲ್ವರು ಅತೃಪ್ತ ಕಾಂಗ್ರೆಸ್ ಶಾಸಕರು ತರಾತುರಿಯಲ್ಲಿ ಆಗಮಿಸಿ ಕಲಾಪದಲ್ಲಿ ಪಾಲ್ಗೊಂಡಿದ್ದು, ಈ ಪೈಕಿ ಮೂವರ ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ. ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಪಕ್ಷದ ನಾಯಕರ ಮಾತಿಗೆ ಸಮ್ಮತಿ ಸೂಚಿಸಿದ್ದು, ಕಾಂಗ್ರೆಸ್ ನಲ್ಲೇ ಮುಂದುವರೆಯುವ ಸಾಧ್ಯತೆ ಇದೆ. ಇನ್ನು ಚಿಂಚೋಳಿ ಕ್ಷೇತ್ರದ ಶಾಸಕ ಉಮೇಶ್ ಜಾಧವ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭಾ ಚುನಾವಣೆಯಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆಂದು ಹೇಳಲಾಗುತ್ತಿದ್ದು, ಇವರನ್ನು ಹೊರತುಪಡಿಸಿ ಮೂವರು ಶಾಸಕರು ಕೈ ಕೊಟ್ಟ ಕಾರಣ ಬಿಜೆಪಿಯ 'ಆಪರೇಷನ್ ಕಮಲ'ಕ್ಕೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಒಟ್ಟಾರೆಯಾಗಿ ಆಪರೇಷನ್ ಕಮಲ ವಿಫಲವಾದರೂ ಕೂಡ ಮತ್ತೆ ಮತ್ತೆ ಸರ್ಕಾರವನ್ನು ಉರುಳಿಸುವಲ್ಲಿ ಪ್ರಯತ್ನ ಮಾಡುತ್ತಲೇ ಇದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಯನ್ನು ಯಾರು ಹಿಡಿಯುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
Comments