ಕಾಂಗ್ರೆಸ್ ಶಾಸಕ ಆತ್ಮಹತ್ಯೆ ಮಾಡಿಕೊಳ್ಳುತ್ತೀನಿ ಅಂದಿದ್ಯಾಕೆ…?
ಲೋಸಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಆಪತರೇಷನ್ ಕಮಲ ಹೆಚ್ಚಾಗಿಯೇ ನಡೆಯುತ್ತಿದೆ… ಸೋಷಿಯಲ್ ಮಿಡೀಯಾದಲ್ಲಿ ಕಾಂಗ್ರೆಸ್ ಶಾಸಕರಾದ ಉಮೇಶ ಜಾಧವ್ ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎಂಬ ಸುದ್ಧಿ ಹೆಚ್ಚಾಗಿ ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ ಜಾಧವ್ ಅವರು, 'ನಾನು 50 ಕೋಟಿ ರೂ.ಗೆ ಮಾರಾಟವಾಗಿದೀನಿ ಎನ್ನುವುದು ಸಾಬೀತಾದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ' ಎಂದು ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಶಾಸಕರು, ಆಪರೇಷನ್ ಕಮಲಕ್ಕೆ ಒಳಗಾಗಿದ್ದೇವೆಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಬಿತ್ತರಿಸಲಾಗುತ್ತಿದೆ.. . ಸ್ಪೀಕರ್ ರಮೇಶ್ ಕುಮಾರ್ ಅವರ ಮೇಲೂ ಕೂಡ ಇಂತಹ ಆರೋಪ ಕೇಳಿ ಬಂದಿದೆ.. ಹೀಗಾಗಿ ಅಧಿವೇಶನವೇ ಸರಿಯಾಗಿ ನಡೆಯಲಿಲ್ಲ. ಹಣ ಪಡೆದಿದ್ದೇವೆ ಎನ್ನುವ ಆರೋಪದಿಂದಾಗಿ ಮನಸ್ಸಿಗೆ ತುಂಬಾ ನೋವಾಗಿದೆ. ಇದರಿಂದಾಗಿ ಮಾನಸಿಕವಾಗಿ ನೊಂದಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಯಾವುದೇ ರೀತಿಯ ಆಮಿಷಕ್ಕೆ ಒಳಗಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
Comments