ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪೈನಲ್...!?
ಈಗಾಗಲೇ ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿಯು ಅಧಿಕಾರದ ಗದ್ದುಗೆಯನ್ನು ಹಿಡಿಯಲು ಎಲ್ಲಾ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ.. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ನಾಳೆ ಬಿಜೆಪಿ ಸಿದ್ಧ ಮಾಡಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಭಾಗವಹಿಸಲಿರುವ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ...
ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದದಂತಹ 17 ಮಂದಿಯ ಪೈಕಿ ಹದಿನಾರು ಮಂದಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ.. ಉಳಿದಂತೆ ಹನ್ನೆರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಬೇಕಿದೆ. ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ಹದಿನೇಳು ಮಂದಿಯ ಪೈಕಿ ಬಳ್ಳಾರಿ ಸಂಸದರಾಗಿದ್ದ ಶ್ರೀರಾಮುಲು ರಾಜೀನಾಮೆ ನೀಡಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬಂದಿದ್ದರು.ಬಿಜೆಪಿ ಪಕ್ಷದಿಂಧ ಯಾರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ನಾಳೆ ಗೊತ್ತಾಗಲಿದೆ.. ಈ ಬಾರಿ ಲೋಕಸಭೆಯಲ್ಲಿ ಬಿಜೆಪಿಯೇ ಅಧಿಕಾರ ಬರಬೇಕೆಂದು ಸಾಕಷ್ಟು ಪ್ರಯತ್ನ ಮಾಡುತ್ತಿದೆ.
Comments