ಬಿಗ್ ಬ್ರೇಕಿಂಗ್: ‘ಕಮಲ’ವನ್ನು ಕಮರಿಸಿ ‘ತೆನೆಹೊತ್ತ’ ನಾಯಕ..!! ಯಾರ್ ಗೊತ್ತಾ..?
ರಾಜಕೀಯದಲ್ಲಿ ಯಾರು ಯಾವಾಗ ಯಾವ ಪಕ್ಷದಲ್ಲಿ ಇರುತ್ತಾರೋ ಗೊತ್ತಿಲ್ಲ….. ಇವತ್ತು ಒಂದು ಪಕ್ಷದಲ್ಲಿ ಇದ್ದವರು..ನಾಳೆ ಮತ್ತೊಂದು ಪಕ್ಷದಲ್ಲಿ ಇರುತ್ತಾರೆ..ಇದೀಗ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರನ್ನು ಜೆಡಿಎಸ್‌ಗೆ ಕರೆತರುವ ಪ್ರಯತ್ನ ಪ್ರಾರಂಭವಾಗಿದೆ..
ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧಾರ ಮಾಡುವುದರಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ತಮಗೆ ಬಿಟ್ಟುಕೊಡುವಂತೆ ಕಾಂಗ್ರೆಸ್ ಮುಂದೆ ಬೇಡಿಕೆ ಇಡುವ ಸಾಧ್ಯತೆಯಿದೆ. ಒಂದು ವೇಳೆ ಈ ಕ್ಷೇತ್ರ ಜೆಡಿಎಸ್ ಪಾಲಾದಲ್ಲಿ ಸದ್ಯ ಬಿಜೆಪಿಯಲ್ಲಿರುವ ಜಯಪ್ರಕಾಶ್ ಹೆಗ್ಡೆ ಅವರನ್ನು ಕರೆತಂದು ಅಭ್ಯರ್ಥಿಯನ್ನಾಗಿಸುವ ಸಾಧ್ಯತೆ ಇದೆ. ಈ ಸಂಬಂಧ ಒಂದು ಸುತ್ತಿನ ಮಾತುಕತೆಯೂ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಜಯಪ್ರಕಾಶ್ ಹೆಗ್ಡೆ ಅವರು ಜೆಡಿಎಸ್ ಪಕ್ಷಕ್ಕೆ ಸೇರಿಕೊಳ್ಳುತ್ತಾರ ಇಲ್ಲವೊ ಎಂಬುದನ್ನು ಕಾದು ನೋಡಬೇಕಿದೆ…
Comments