ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿದ ಸುಮಲತಾ ಅಂಬರೀಶ್ ನಡೆ..!! ಕೊನೆಗೂ ಪಕ್ಷ ಫೈನಲ್ ಆಯ್ತಾ..?
ಈಗಾಗಲೇ ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷದವರು ಸಿದ್ದತೆಗಳನ್ನು ನಡೆಸಿಕೊಳ್ಳುತ್ತಿರುವಾಗಲೇ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ… ಅದರಲ್ಲೂ ಮಂಡ್ಯ ಲೋಕಸಭಾ ಅಖಾಡ ಮಾತ್ರ ದಿನದಿಂದ ದಿನಕ್ಕೆ ರಣ ರಂಗವಾಗುತ್ತಿದೆ.. ಜೆಡಿಎಸ್ ಗೆ ಭದ್ರ ಬುನಾದಿಯಂತಿರುವ ಮಂಡ್ಯವನ್ನು ಕಾಂಗ್ರೆಸ್ ಗೆ ಬಿಟ್ಟು ಕೊಡುವುದು ಹೇಗೆ ಎಂಬ ಪ್ರಶ್ನೆ ಎದುರಾಗುತ್ತಿದೆ. ಒಂದು ಕಡೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುಮಲತಾ ಅಖಾಡಕ್ಕೆ ಇಳಿಯಲು ನಿರ್ಧಾರ ಮಾಡಿದ್ರೆ, ಮತ್ತೊಂದು ಕಡೆ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಅವರನ್ನು ಕಣಕ್ಕಿಳಿಸಲು ಒಂದು ಕಡೆ ಮಾತು ಕತೆ ನಡೆಯುತ್ತಿದೆ… ಇದರ ನಡುವೆ ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟು ಕೊಡುವುದೋ ಅಥವಾ ಜೆಡಿಎಸ್ ಗೋ ಎಂಬ ಗೊಂದಲ ಸೃಷ್ಟಿಯಾಗಿದೆ.. ಆದರೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಬೇಕಾಗಿದೆ.. ಹಾಗಾಗಿ ಮಂಡ್ಯ ಟಿಕೇಟ್ ಯಾರಿಗೆ ಎಂಬ ಪ್ರಶ್ನೆ ಇದೀಗ ಎದುರಾಗಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ನಟಿ ಸುಮಲತಾ ಅಂಬರೀಶ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಹೆಚ್ಚು ಕುತೂಹಲ ಮೂಡಿಸಿದೆ.ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಮೈತ್ರಿ ಏರ್ಪಟ್ಟರೆ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಬೇಕಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದರ ಮಧ್ಯೆ ಸಿದ್ದರಾಮಯ್ಯನವರನ್ನು ಭೇಟಿಯಾದ ಸುಮಲತಾ ಅಂಬರೀಶ್, ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.
ಸಿದ್ದರಾಮಯ್ಯನವರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಂಡ್ಯ ಅಭಿಮಾನಿಗಳು ಸಾಕಷ್ಟು ಒತ್ತಾಯ ಮಾಡುತ್ತಿದ್ದಾರೆ. ಅವರ ಅನಿಸಿಕೆಯನ್ನು ಹಿರಿಯ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ಮಾಡಬೇಕೆಂಬ ಕಾರಣಕ್ಕೆ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದೇನೆ. ಅಭಿಮಾನಿಗಳ ಅಪೇಕ್ಷೆ ಏನೂ ಅನ್ನೋದನ್ನು ಅವರ ಮುಂದೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಚುನಾವಣೆಯಲ್ಲಿನ ಸ್ಪರ್ಧೆ ಕುರಿತು ಆತುರ ಮಾಡುವುದಿಲ್ಲ ಎಂದು ಹೇಳಿರುವ ಸುಮಲತಾ ಅಂಬರೀಶ್, ಕಾಂಗ್ರೆಸ್ ಪಕ್ಷದ ಅಭಿಪ್ರಾಯ ಏನಿದೆ ಅನ್ನೋದನ್ನು ತಿಳಿದುಕೊಳ್ಳಬೇಕಿದೆ. ಒಂದು ವೇಳೆ ಮೈತ್ರಿ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕಾದ ಸಂದರ್ಭ ಬಂದರೆ ಆಗ ನಾನು ಜನರ ಅಭಿಪ್ರಾಯಕ್ಕೆ ಮನ್ನಣೆ ಕೊಡುತ್ತೇನೆ ಎಂದು ಹೇಳುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂಬ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಮಂಡ್ಯ ಅಖಾಡದಲ್ಲಿ ಸ್ಪರ್ಧಿಸಿ ಸಕ್ಕರೆನಾಡಿನ ಜನರ ಪ್ರೀತಿಯನ್ನು ಯಾರು ಗಳಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
Comments