ಸುಮಲತಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬೆಂಬಲಿಸುತ್ತಿರುವ ಸಚಿವರ್ಯಾರು ಗೊತ್ತಾ..?

ಮುಂಬರುವ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಸಾಕಷ್ಟು ಜನರು ಒಲವು ತೋರಿಸುತ್ತಿದ್ದಾರೆ.. ಸುಮಲತಾ ನಿಲ್ಲಿವುದಾದರೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಅಂತಾ ಹೇಳುತ್ತಿದ್ದಾರೆ.. ಆದರೆ ಜೆಡಿಎಸ್ ನ ಭದ್ರ ಬುನಾದಿಯಾಗಿರುವ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಅವರನ್ನು ಕಣಕ್ಕಿಳಿಸಲು ಯೋಚಿಸಲಾಗುತ್ತಿದೆ..
ನಟಿ ಸುಮಲತಾ ಅಂಬರೀಶ್ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನನ್ನ ಬೆಂಬಲವಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಮಾತನಾಡಿದ ಅವರು, 'ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಸೀಟು ಹಂಚಿಕೆಯಾಗಬೇಕಿದೆ. ಮಂಡ್ಯ ಕ್ಷೇತ್ರ ಜೆಡಿಎಸ್‍ಗೆ ಹೋಗುತ್ತೋ ಅಥವಾ ಕಾಂಗ್ರೆಸ್‍ಗೆ ಬರುತ್ತೋ ಗೊತ್ತಿಲ್ಲ. ಒಂದು ವೇಳೆ ಮಂಡ್ಯ ಕ್ಷೇತ್ರ ಕಾಂಗ್ರೆಸ್ಸಿಗೆ ಹಂಚಿಕೆಯಾದರೆ ಸುಮಲತಾ ಅವರೇ ನಮ್ಮ ಅಭ್ಯರ್ಥಿ. ಸುಮಲತಾ ಅಂಬರೀಶ್ ಅವರ ಹೆಸರು ಶಿಫಾರಸ್ಸಿಗೆ ನನ್ನ ಮೊದಲ ಬೆಂಬಲವಿದೆ ಎಂದು ತಿಳಿಸಿದರು.
Comments