ರಾಜಕೀಯ ಕ್ಷೇತ್ರ ಬದಲಿಸ್ತಾರಾ ಸುಮಲತಾ ಅಂಬರೀಶ್..? ಹಾಗಾದ್ರೆ ಯಾವ ಕ್ಷೇತ್ರ ಗೊತ್ತಾ..?

ಮುಂಬರುವ ಲೋಕಸಭಾ ಚುನಾವಣೆಗೆ ಈಗಾಗಲೇ ರಾಜಕೀಯ ಪಾಳಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ…ಅದರಲ್ಲೂ ಮಂಡ್ಯ ಲೋಕಸಭಾ ಚುನಾವಣೆ ಮಾತ್ರ ಹೆಚ್ಚು ರಂಗೇರುತ್ತಿದೆ.. ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಚುನಾವಣೆಯ ಅಖಾಡಕ್ಕೆಇಳಿಯುತ್ತಾರೆ ಎಂಬ ಮಾತುಗಳು ಹೆಚ್ಚಾಗಿಯೇ ಕೇಳಿಬರುತ್ತಿವೆ..ಆದರೆ ಇದೀಗ ಮಂಡ್ಯ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದಿಂದ ಸ್ಪರ್ಧಿಸುತ್ತಾರ ಎಂಬ ಮಾತುಗಳು ಕೇಳಿಬರುತ್ತಿವೆ..
ಸುಮಲತಾ ಅಂಬರೀಶ್ ಅವರನ್ನು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಪಾಳಯದಲ್ಲಿ ಚಿಂತನೆ ನಡೆದಿದೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ಸುಮಲತಾ ಅಂಬರೀಶ್ ಅವರ ಮನವೊಲಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಈ ಬಾರಿ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಅಂಬರೀಶ್ ಅಭಿಮಾನಿಗಳು ಹಾಗೂ ಮಂಡ್ಯದ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಒತ್ತಡ ಹಾಕಿರುವ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿಯಾಗಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗುವುದು. ಈ ಕಾರಣದಿಂದ ಸುಮಲತಾ ಅಂಬರೀಶ್ ಅವರ ಮನವೊಲಿಸಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.. ಒಟ್ಟಾರೆಯಾಗಿ ಸುಮಲತಾ ಅವರನ್ನು ಲೋಕಸಭಾ ಅಖಾಡಕ್ಕೆ ಇಳಿಸಲೇ ಬೇಕು ಎಂದು ಸದ್ಯದ ವಿಷಯವಾಗಿದೆ.. ಹಾಗಾಗಿ ಟೀಕೆಟ್ ಯಾವ ಕ್ಷೇತ್ರದಿಂದ ಸಿಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Comments