ದೋಸ್ತಿ ಸರ್ಕಾರದ ಮೂವರು ಅತೃಪ್ತ ಶಾಸಕರ ರಾಜೀನಾಮೆ..!! ಯಾರ್ಯಾರು ಗೊತ್ತಾ..?
ಈಗಾಗಲೇ ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷದವರು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಸಮಯದಲ್ಲಿಯೇ ಕೆಲವು ಅತೃಪ್ತ ಶಾಸಕರು ಪಕ್ಷದಿಂದ ಪಕ್ಷಕ್ಕೆ ಹಾರುವ ಕೆಲಸವನ್ನು ಮಾಡುತ್ತಿದ್ದಾರೆ.. ಇದೀಗ ದೋಸ್ತಿ ಸರ್ಕಾರಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ… ಕಾಂಗ್ರೆಸ್’ನ ಮೂವರು ಅತೃಪ್ತ ಶಾಸಕರು ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ..
ಕಾಂಗ್ರೆಸ್ ನ ಮೂವರು ಶಾಸಕರು ರಾಜೀನಾಮೆ ನೀಡಿದ ನಂತರ ಮಾರ್ಚ್ 7 ರಂದು ನಿಗದಿಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ…. ಚಿಂಚೋಳಿ ಶಾಸಕರಾದ ಉಮೇಶ್ ಜಾಧವ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದ ದೋಸ್ತಿ ಸರ್ಕಾರಕ್ಕೆ ತೊಂದರೆಯಾಗಬಹುದು, ಒಂದು ವೇಳೆ ತೊಂದರೆಯಾಗುವುದಿಲ್ಲ ಎಂದುಕೊಂಡರು ಇವರ ಜೊತೆ ಬೇರೆ ಶಾಸಕರು ಹೋದರೆ ಎಂಬ ಭೀತಿ ದೋಸ್ತಿ ಸರ್ಕಾರಕ್ಕೆ ಕಾಡುತ್ತಿದೆ.
Comments