ಬಹಿರಂಗವಾಗಿಯೇ ಸುಮಲತಾಗೆ ಸಾಥ್ ಕೊಟ್ಟ ಕಾಂಗ್ರೆಸ್ ನಾಯಕರು..!
ಇದೀಗ ಎಲ್ಲಿಗೆ ಹೋದರು ಕೂಡ ಸುಮಲತಾ ಅಂಬರೀಶ್ ಅವರದೆ ಆದ ಸುದ್ದಿ.. ಜೊತೆಗೆ ಮಂಡ್ಯದೇ ಸುದ್ದಿ...ಸುಮಲತಾ ಮಂಡ್ಯ ಅಖಾಡದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ.. ಕೈ ಪಕ್ಷದ ಟಿಕೇಟ್ ಸಿಗದೆ ಇದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಿಂತುಕೊಳ್ಳುತ್ತೇನೆ ಎನ್ನುತ್ತಿದ್ದಾರೆ ಸುಮಲತಾ.. ಕೆಲವು ಕಾಂಗ್ರೆಸ್ ಕಾರ್ಯಕರ್ತರಿಗೆ ಸುಮಲತಾ ಗೆ ಕಾಂಗ್ರೆಸ್ ಟಿಕೇಟ್ ಸಿಗಲೇಬೇಕು ಎನ್ನುತ್ತಿದ್ದಾರೆ.. ಹಾಗಾಗಿ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಪರೋಕ್ಷವಾಗಿ ಬೆಂಬಲವನ್ನು ನೀಡುತ್ತಿದ್ದರು..
ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರು ಸುಮಲತಾ ಅವರಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಾರೆ ಎಂಬ ಮಾತು ಕೇಳಿ ಬರುತ್ತಿತ್ತು. ಇದೀಗ ಪ್ರಸನ್ನಕುಮಾರ್ ಎಂಬುವವರು ಬಹಿರಂಗ ಹೇಳಿಕೆಯನ್ನು ನೀಡಿದ್ದಾರೆ. ನಾನು ಸುಮಲತಾ ಅವರಿಗೆ ಬೆಂಬಲ ನೀಡುತ್ತೇನೆ ಎಂದು.. ತೆರೆಮರೆಯ ಬದಲಾಗಿ ನೇರವಾಗಿಯೇ ಕಾಂಗ್ರೆಸ್ ಮುಖಂಡರು ಸುಮಲತಾ ಅವರ ಹೆಸರನ್ನು ಪ್ರಸ್ತಾಪಿಸಲು ಪ್ರಾರಂಭ ಮಾಡಿದ್ದಾರೆ... ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗುತ್ತಿದ್ದು, ಅವರನ್ನು ಗೆಲ್ಲಿಸಲು ಮೈತ್ರಿ ಪಕ್ಷದ ನಾಯಕರು ಒಟ್ಟಾಗಿ ಕೆಲಸ ಮಾಡಬೇಕಿತ್ತು. ಆದರೆ, ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಲು ಆರಂಭಿಸಿದ್ದಾರೆ.. ಮುಂದೆ ರಾಜ್ಯ ರಾಜಕೀಯ ವಲಯದಲ್ಲಿ ಇದು ಎಷ್ಟರ ಮಟ್ಟಿಗೆ ಸುದ್ದಿಯಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Comments