ಇಂದು ದೋಸ್ತಿ ಸರ್ಕಾರಕ್ಕೆ ‘ಕೈ’ ಕೊಟ್ಟು ‘ಬಿಜೆಪಿ’ ಸೇರ್ತಾರ ಈ ಪ್ರಭಾವಿ ನಾಯಕ..!!

ಈಗಾಗಲೇ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ… ದಿನಾಂಕ ಘೋಷಣೆಯಾದ ಹಿನ್ನಲೆಯಲ್ಲಿಯೇ ಅತೃಪ್ತ ಶಾಸಕರು ಪಕ್ಷದಿಂದ ಪಕ್ಷಕ್ಕೆ ಹಾರುತ್ತಿದ್ದಾರೆ.. ಇತ್ತಿಚಿಗಷ್ಟೆ ಉಮೇಶ್ ಜಾಧವ್ ಕೈ ಪಕ್ಷ ಬಿಟ್ಟು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದರು.. ಇದೀಗ ಅದೇ ಸಾಲಿನಲ್ಲಿ ಎ ಮಂಜು ಕೂಡ ಸಾಗುತ್ತಿದ್ದಾರೆ ಎನ್ನಲಾಗಿದೆ.. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಮಿತ್ರ , ಮಾಜಿ ಸಚಿವ ಎ . ಮಂಜು ಅವರು ಬಿಜೆಪಿ ಸೇರ್ಪಡೆ ಬಗ್ಗೆ ಇಂದು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಎ. ಮಂಜು ಅವರು ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಸಾಕಷ್ಟು ಬಾರಿ ಭೇಟಿಯಾಗಿದ್ದಾರೆ, ಅಷ್ಟೆ ಅಲ್ಲದೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಬರುವಂತೆ ತಮ್ಮ ಬೆಂಬಲಿಗರಿಗೂ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ..
ಹಾಸನದ ಖಾಸಗಿ ಹೋಟೆಲ್ ನಲ್ಲಿ ಕಳೆದ ಸೋಮವಾರವಷ್ಟೇ ಸಭೆ ನಡೆಸಿರುವ ಎ.ಮಂಜು, ತಮ್ಮ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಲು ಸಲಹೆ ನೀಡಿದ್ದಾರೆ. ಜೆಡಿಎಸ್ ವಿರುದ್ಧ ಸಂಘಟಿತ ಹೋರಾಟ ನಡೆಸಲು ಕಾರ್ಯಕರ್ತರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.. ಒಟ್ಟಾರೆಯಾಗಿ ಹೀಗೆ ಒಬ್ಬರಾದ ನಂತರ ಮತ್ತೊಬ್ಬರು ದೋಸ್ತಿ ಸರ್ಕಾರಕ್ಕೆ ಕೈ ಕೊಡುತ್ತಿದ್ದರೆ ಅಧಿಕಾರ ಕಳೆದುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ ಎನ್ನಲಾಗುತ್ತಿದೆ.
Comments