‘ತೆನೆಹೊರಲು’ ಸಿದ್ಧರಾದ ‘ಕೈ’ ಶಾಸಕ..!! ಯಾರ್ ಗೊತ್ತಾ..?

ಲೋಕಸಭಾ ಚುನಾವಣೆಯು ಹತ್ತಿರ ಬರುತ್ತಿದ್ದಂತೆ ಶಾಸಕರು ಪಕ್ಷದಿಂದ ಪಕ್ಷಕ್ಕೆ ಹಾರುತ್ತಿದ್ದಾರೆ.. ಮೊನ್ನೆ ಮೊನ್ನೆಯಷ್ಟೆ ಉಮೇಶ್ ಜಾಧವ್, ಎ ಮಂಜು ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹಾರಿದರು… ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಾವು ಸಿದ್ಧ. ಆದರೆ, ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂಬ ಗೊಂದಲದ ಹೇಳಿಕೆ ನೀಡಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕರು ಜೆಡಿಎಸ್‌ನಿಂದ ಆಹ್ವಾನ ಬಂದಿದ್ದರೆ ಹಾಗೂ ಸ್ಪರ್ಧಿಸುವ ಮನಸ್ಸು ಇದ್ದರೆ ಆ ಪಕ್ಷದಿಂದಲೇ ಸ್ಪರ್ಧಿಸಬೇಕಾಗುತ್ತದೆ.
ಮೈತ್ರಿಕೂಟವಾಗಿ ಜೆಡಿಎಸ್-ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದ್ದರೂ ಬೇರೆ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯವಿಲ್ಲ. ಆ ಪಕ್ಷದ ಚಿಹ್ನೆ ಅಡಿಯಲ್ಲೇ ಸ್ಪರ್ಧಿಸಬೇಕಾಗುತ್ತದೆ ಎಂದು ತಿಳಿ ಹೇಳಿದರು ಎಂದು ಮೂಲಗಳು ತಿಳಿಸಿವೆ. ಸಭೆಯ ನಂತರ ಸಂಜೆ ದೇವೇಗೌಡ ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿ ಮಾತುಕತೆ ನಡೆಸಿದ ಪ್ರಮೋದ್ ಮಧ್ವರಾಜ್ ಅವರು, ನನಗೆ ಕಾಂಗ್ರೆಸ್ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸುವ ಮನಸ್ಸು ಇದೆ. ಆದರೆ, ಕ್ಷೇತ್ರ ಜೆಡಿಎಸ್ ತೆಕ್ಕೆಗೆ ಹೋಗಿದೆ. ಈ ಕ್ಷೇತ್ರ ಮತ್ತೆ ಕಾಂಗ್ರೆಸ್ ಪಾಲಿಗೆ ಬರಬೇಕಾದರೆ ಹೈಕಮಾಂಡ್ ನಿರ್ಧಾರ ಮಾಡಬೇಕು. ಇದು ಸಾಧ್ಯವಾಗದಿದ್ದರೆ ಮತ್ತು ಉಭಯ ಪಕ್ಷಗಳ ನಾಯಕರು ಒಪ್ಪಿದರೆ ಜೆಡಿಎಸ್ ಚಿಹ್ನೆ ಅಡಿಯೇ ಸ್ಪರ್ಧೆಗೆ ನಾನು ಸಿದ್ಧ ಎಂದು ತಿಳಿಸಿದರು.ಒಟ್ಟಾರೆಯಾಗಿ ಚುನಾವಣೆಗೆ ಸ್ಪರ್ಧಿಸಬೇಕಾದರೆ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಗೆ ಹೋಗಬೇಕಾಗುತ್ತದೆ.. ಹಾಗಾಗಿ ಪ್ರಮೋದ್ ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
Comments