ಇಂದು ಲೋಕಸಭಾ ಅಭ್ಯರ್ಥಿಯಾಗಿ ಪ್ರಕಾಶ್ ರೈ ನಾಮಪತ್ರ ಸಲ್ಲಿಕೆ..!! ಪಕ್ಷ ಯಾವುದು ಗೊತ್ತಾ..?

ಈಗಾಗಲೇ ಲೋಕಸಭಾ ಚುನಾವಣೆಯ ದಿನಾಂಕ ನಿಗಧಿಯಾಗಿದೆ.. ಈ ಹಿನ್ನಲೆಯಲ್ಲಿಯೇ ಅಭ್ಯರ್ಥಿಗಳ ಆಯ್ಕೆಯಲ್ಲಿ ಎಲ್ಲಾ ಪಕ್ಷದವರು ಕೂಡ ಬ್ಯುಸಿಯಾಗಿದ್ದಾರೆ.. ತಮ್ಮ ತಮ್ಮ ಅಭ್ಯರ್ಥಿಗಳ ಆಯ್ಕೆಯಲ್ಲಿದ್ದಾರೆ… ಆದರೆ ಪಕ್ಷೇತರವಾಗಿ ನಿಲ್ಲುವ ಅಭ್ಯರ್ಥಿಗಳು ನಮಗೆ ಯಾರ ಅಂಗು ಬೇಡ ಅಂತ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈಗಾಗಲೇ ಮಂಡ್ಯ ಅಖಾಡದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಕಣಕ್ಕೆ ಇಳಿದಿದ್ದಾರೆ..
ಇದೀಗ ಲೋಕಸಭೆ ಚುನಾವಣೆಗೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ನಟ ಪ್ರಕಾಶ್ ರೈ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇಂದು ಬಿಬಿಎಂಪಿ ಕಚೇರಿಯಲ್ಲಿ ಪ್ರಕಾಶ್ ರೈ ಅವರು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇನ್ನು ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಕಾಶ್ ರೈ, ಇಂದು ಬೆಳಗ್ಗೆ ಹಲಸೂರಿನ ಗಣಪತಿ ದೇವಸ್ಥಾನ, ತವಕ್ಕಲ್ ಮಸ್ತಾನ್ ಶಾ ದರ್ಗಾ ಹಾಗೂ ಸೆಂಟ್ ಫ್ರಾನ್ಸಿಸ್ ಚರ್ಚ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನಂತರ ಅಸ್ಟ್ರಿನ್ ಟೌನ್ ನಲ್ಲಿರುವ ನಂದ ಕ್ರೀಡಾಂಗಣದಿಂದ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಬಂದು ನಾಮಪತ್ರ ಸಲ್ಲಿಕೆ ಮಾಡಿದರು. ಪ್ರಕಾಶ್ ರೈ ಈಗಾಗಲೇ ಸಾಕಷ್ಟು ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆಯನ್ನು ಹಿಡಿಯುತ್ತಾರ ಎನ್ನುವುದನ್ನು ಕಾದು ನೋಡಬೇಕಿದೆ.
Comments