ಬೆಂಗಳೂರು ದಕ್ಷಿಣದಿಂದ ತೇಜಸ್ವಿನಿ ಅನಂತ್ ಕುಮಾರ್ ಗೆ ಕೈ ತಪ್ಪಿದ ಟಿಕೆಟ್.!

ಈಗಾಗಲೇ ಲೋಕಸಮರ ಶುರುವಾಗಿ ಬಿಟ್ಟಿದೆ… ಕೆಲವು ಟಿಕೇಟ್ ಆಕಾಂಕ್ಷಿಗಳಿಗೆ ಟಿಕೆಟ್ ಸಿಕ್ಕರೆ ಮತ್ತೆ ಕೆಲವರಿ ಟಿಕೆಟ್ ಕೈ ತಪ್ಪಿದೆ.. ಇದೇ ಹಿನ್ನಲೆಯಲ್ಲಿ ಸಾಕಷ್ಟು ಅತೃಪ್ತ ಶಾಸಕರು ಪಕ್ಷದವರ ಮೇಲೆ ಗರಂ ಆಗಿದ್ದಾರೆ.. ಮಂಡ್ಯದಲ್ಲಿಯೂ ಕೂಡ ಸುಮಲತಾ ಅವರಿಗೆ ಟಿಕೆಟ್ ತಪ್ಪಿದ ಕಾರಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದಾರೆ. ಆದರೆ ಬೆಂಗಳೂರು ದಕ್ಷಿಣದಿಂದ ತೇಜಸ್ವಿನಿ ಅವರಿಗೆ ಟಿಕೆಟ್ ಕೈ ತಪ್ಪಿದೆ.. ಆದರೆ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡಲ್ಲ ಎನ್ನುತ್ತಿದ್ದಾರೆ. ಇನ್ನೂ ಯುವ ನಾಯಕ ತೇಜಸ್ವಿ ಸೂರ್ಯ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಈ ನಡುವೆ ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ, ರಾಜ್ಯ ಬಿಜೆಪಿ ಅಧ್ಯಕ್ಷರು ಮಾತನಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿರುವ ಅವರು ನಾವು ಬೆಂಗಳೂರು ದಕ್ಷಿಣ ಕ್ಷೇತ್ರದ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ನೀಡಬೇಕು ಅಂತ ನಾವು ಹೈಕಮಾಂಡ್‌ಗೆ ಮನವಿ ಮಾಡಿಕೊಂಡಿದ್ದೆವು, ಆದರೆ ನಿನ್ನೆ ರಾತ್ರಿ ಪಟ್ಟಿ ನೋಡಿ ನಮಗೆ ಆಶ್ವರ್ಯವಾಗಿದೆ ಅಂತ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.. ಇನ್ನು ಬೆಂಗಳೂರು ದಕ್ಷಿಣ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಸಿಡಿದೆದ್ದ ಅನಂತಕುಮಾರ್ ಅಭಿಮಾನಿಗಳು 'ತೇಜಸ್ವಿ ಸೂರ್ಯ ಗೋ ಬ್ಯಾಕ್, ನ್ಯಾಯ ಬೇಕು, ನ್ಯಾಯ ಬೇಕು' ಎಂದು ಘೋಷಣೆ ಕೂಗಿದರು. ಇದರಿಂದಾಗಿ ಕೆಲ ಕಾಲ ಸೌತ್ ಎಂಡ್ ಸರ್ಕಲ್ ನ ತೇಜಸ್ವಿನಿ ಅನಂತಕುಮಾರ್ ನಿವಾಸದ ಎದುರು ಬಿಗುವಿನ ವಾತಾವರಣ ಏರ್ಪಟ್ಟಿತು. ಪರಿಸ್ಥಿತಿ ಹತೋಟಿಗೆ ತಂದ ಬಿಜೆಪಿ ಮುಖಂಡರು, ಅಭಿಮಾನಿಗಳನ್ನು ಸಮಾಧಾನ ಪಡಿಸಿದ್ದಾರೆ.ಅಭಿಮಾನಿಗಳ ಒತ್ತಾಯದ ಮೇರೆಗೆ ತೇಜಸ್ವಿನಿ ಅನಂತಕುಮಾರ್ ಸ್ವತಂತ್ರವಾಗಿ ಕಣಕ್ಕಿಳಿದರೆ ಆಶ್ಚರ್ಯ ಪಡಬೇಕಿಲ್ಲ…
Comments