ಸಿಎಂ ಕುಮಾರಸ್ವಾಮಿಯವರ ಆಪ್ತರ ಮನೆ ಮೇಲೆ ಐಟಿ ದಾಳಿ..!!
ಈಗಾಗಲೇ ಲೋಕ ಸಮರ ಪ್ರಾರಂಭವಾಗಿ ಬಿಟ್ಟಿದೆ… ಹೀಗಿರುವಾಗ ತೆರಿಗೆ ಇಲಾಖೆ ಅಧಿಕಾರಿಗಳು ರಾಜ್ಯದ ಕೆಲ ಪ್ರಭಾವಿ ವ್ಯಕ್ತಿಗಳ ಮನೆಯ ಮೇಲೆ ಐಟಿ ದಾಳಿ ಮಾಡಬಹುದು ಎಂಬ ಮಾತುಗಳನ್ನು ಹೇಳಿದ್ದರು.. ಇದೀಗ ಅದಕ್ಕೆ ಪುಷ್ಟಿ ನೀಡುವಂತೆ ಇದೀಗ ಕುಮಾರಸ್ವಾಮಿಯುವರು ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಿಎಂ ಆಪ್ತ ಸಿ.ಎಸ್. ಪುಟ್ಟರಾಜು ಮತ್ತವರ ಸಂಬಂಧಿಕರ ಮೇಲೆ ತೆರಿಗೆ ದಾಳಿ ನಡೆದಿದೆ.. .ಇಂದು ಬೆಳ್ಳಂಬೆಳ್ಳಿಗೆ ಸಚಿವ ಪುಟ್ಟರಾಜು ಮನೆ ಮೇಲೆ ಐಟಿ ದಾಳಿ ನಡೆದಿದೆ.
ನಿನ್ನೆ ತಡರಾತ್ರಿಯಿಂದ ಐಟಿ ತಂಡ ರಾಜ್ಯದ ಹಲವೆಡೆ ದಾಳಿ ನಡೆಸಿದ್ದು, ಇಂದು ಬೆಳ್ಳಂ ಬೆಳಿಗ್ಗೆ ಸಚಿವ ಸಿ. ಎಚ್ ಪುಟ್ಟರಾಜು ಹಾಗೂ ಅವರ ಸಂಬಂಧಿಕರ ಮೇಲೆ ದಾಳಿ ನಡೆಸಿದೆ. ಪುಟ್ಟರಾಜು ಅಣ್ಣನ ಮಗ ಜಿಲ್ಲಾ ಪಂಚಾಯತ್ ಸದಸ್ಯ ಅಶೋಕ್ ಹಾಗೂ ಪುಟ್ಟರಾಜು ಸ್ವಗ್ರಾಮ ಚಿನಕುರಳಿಯಲ್ಲಿರುವ ಮನೆ ಮೇಲೂ ಕೂಡ ಐಟಿ ದಾಳಿ ನಡೆದಿದೆ ಬುಧವಾರ ರಾತ್ರಿಯೂ ಉದ್ಯಮಿಗಳ ಮನೆಗಳ ಮೇಲೆ ಐಟಿ ಕಾರ್ಯಾಚರಣೆ ನಡೆದಿದೆ.
ಜಯನಗರ, ಬಸವನಗುಡಿ, ಜೆ.ಪಿ.ನಗರ ಸೇರಿದಂತೆ ನಗರದ ವಿವಿಧೆಡೆ ಉದ್ಯಮಿಗಳಿಗೆ ಐಟಿ ಚಾಟಿ ಬೀಸಿದ್ದು, ಇದರಲ್ಲಿ ಪ್ರಮುಖವಾಗಿ ಜಯನಗರದ ಸೌತ್ ಎಂಡ್ ಸರ್ಕಲ್ ಹತ್ತಿರದಲ್ಲಿರುವ ಮುಖ್ಯಮಂತ್ರಿಗಳ ಆಪ್ತ ಎನ್ನಲಾದ ಉದ್ಯಮಿ ಸಿದ್ದಿಕ್ ಸೇಠ್ ನಿವಾಸದಲ್ಲೂ ಐಟಿ ಶೋಧ ನಡೆಸಿದೆ ಎಂದು ತಿಳಿದು ಬಂದಿದೆ.. ಒಟ್ಟಾರೆಯಾಗಿ ಲೋಕ ಸಭಾ ಚುನಾವನೆಯ ಹಿನ್ನಲೆಯಲ್ಲಿ ಈ ರೀತಿಯಾಗಿ ನಡೆಯುತ್ತಿರುವುದು ಹಲವು ಅನುಮಾನಗಳಿಎಗ ಕಾರಣವಾಗಿದೆ ಎನ್ನಬಹುದು.. ಸಿಎಂ ಕುಮಾರಸ್ವಾಮಿಯವರ ಮನೆ ಮೇಲೂ ಕೂಡ ಐಟಿ ದಾಳಿ ಆದರೆ ಆಶ್ಚರ್ಯ ಪಡುವ ಅಗತ್ಯವಿಲ್ಲ… ದೋಸ್ತಿ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಈ ರೀತಿಯಾಗಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೂಡ ಕೇಳಿಬರುತ್ತಿವೆ.
Comments