ನಿಖಿಲ್ ಕುಮಾರಸ್ವಾಮಿಗೆ ಸೋಲು ಖಚಿತ..!! ಭವಿಷ್ಯ ನುಡಿದ ಶಾಸಕ..!!!

ಅದ್ಯಾಕೋ ಗೊತ್ತಿಲ್ಲ ಮಂಡ್ಯ ಲೋಕಸಭಾ ಅಖಾಡ ತಣ್ಣಗೆ ಆಗುವ ರೀತಿಯಲ್ಲಿ ಕಾಣುತ್ತಿಲ್ಲ.. ದಿನಕ್ಕೊಂದು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸುಮಲತಾ ಅಂಬರೀಶ್ ಹಾಗೂ ನಿಖಿಲ್ ಕುಮಾರಸ್ವಾಮಿ ಮಧ್ಯೆ ಜಟಾಪಟಿ ಏರ್ಪಟ್ಟಿದೆ…ಸುಮಲತಾ ಪರ ಸ್ಟಾರ್ ನಾಯಕರು ಪ್ರಚಾರಕ್ಕೆ ಇಳಿದರೆ, ನಿಖಿಲ್ ಪರ ರಾಜಕೀಯ ನಾಯಕರು ಪ್ರಚಾರ ಮಾಡುತ್ತಿದೆ.. ಮಂಡ್ಯ ಜನತೆಯ ಒಲವೋ ಸುಮಲತಾ ಪರವೋ ಅಥವಾ ನಿಖಿಲ್ ಪರವೋ ಗೊತ್ತಿಲ್ಲ… ಒಟ್ಟಿನಲ್ಲಿ ಬಿಸಿಲು ಎನ್ನದೆ ಪ್ರಚಾರದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಆದರೆ ನಿಖಿಲ್ ಸೋಲುತ್ತಾರೆ ಎನ್ನುವ ಮಾತನ್ನು ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಒಂದೇ ಒಂದು ಸ್ಥಾನ ಗೆಲ್ಲುವುದು ಕೂಡ ಕಠಿಣವಾಗಲಿದೆ ಎಂದು ಬಿಜೆಪಿ ಮುಖಂಡ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮುಲು ಗುಪ್ತಚರ ಮಾಹಿತಿ ಪ್ರಕಾರ, ಜೆಡಿಎಸ್ ಒಂದು ಸ್ಥಾನವನ್ನು ಗೆಲ್ಲುವುದಿಲ್ಲ. ಹೀಗಾಗಿ ಜೆಡಿಎಸ್ ಮುಖಂಡರು ಬೇರೆ ಯಾವುದೇ ಕ್ಷೇತ್ರಕ್ಕೆ ಹೋಗದೇ ಮಂಡ್ಯ, ತುಮಕೂರು, ಹಾಸನದಲ್ಲಿ ಮಾತ್ರ ಪ್ರಚಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.. ಮಂಡ್ಯದಲ್ಲಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಸೋಲುತ್ತಾರೆ. ತುಮಕೂರಿನಲ್ಲಿ ದೇವೇಗೌಡರು ಸೋಲುತ್ತಾರೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲುತ್ತಾರೆ ಎಂದು ಭವಿಷ್ಯವನ್ನು ನುಡಿದ್ದಾರೆ…
Comments