ಸಿಎಂ ಕುಮಾರಸ್ವಾಮಿ ಕಾರಿನಲ್ಲಿ ಕಾಣಿಸಿಕೊಂಡ ರೌಡಿ ಶೀಟರ್..!!

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿವೆ.ಇದೀಗ ಮತ್ತೊಂದು ವಿಷಯಕ್ಕೆ ಕುಮಾರಸ್ವಾಮಿಯವರು ಸುದ್ದಿಯಾಗಿದ್ದಾರೆ. ಸಿಎಂ ಕುಮಾರಸ್ವಾಮಿ ಬೆಂಗಾವಲು ಪಡೆಯ ವಾಹನದಲ್ಲಿ ರೌಡಿ ಶೀಟರ್ ಕಾಣಿಸಿಕೊಂಡಿರುವುದು ಇದೀಗ ರಾಜಕೀಯ ವಲಯದಲ್ಲಿ ಮಾತ್ರವಲ್ಲದೆ ಸಾರ್ವಜನಿಕರಲ್ಲೂ ಕೂಡ ವಿವಾದಕ್ಕೆ ಕಾರಣವಾಗಿದೆ.
ಮಳವಳ್ಳಿ ತಾಲೂಕಿನ ಕಿರುಗಾವಲು ವ್ಯಾಪ್ತಿಯಲ್ಲಿ ಸಿಎಂ ರೋಡ್ ಶೋ ಸಮಯದಲ್ಲಿ ರೌಡಿ ಶೀಟರ್ ಪ್ರಕಾಶ್ ಸಿಎಂ ಬೆಂಗಾವಲು ಪಡೆ ವಾಹನದಲ್ಲಿ ಕುಳಿತು ಕೊಂಡಿದ್ದಾನೆ ಎನ್ನಲಾಗಿದೆ. ಹೀಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಾವಲು ಪಡೆ ವಾಹನದಲ್ಲಿ ರೌಡಿ ಶೀಟರ್ ನನ್ನು ಪೊಲೀಸ್ ಇಲಾಖೆ ಕೂರಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಅಂತ ಸ್ಥಳೀಯ ಜನತೆ ಪ್ರಶ್ನೆ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ಒಂದಲ್ಲ ಒಂದು ವಿಷಯಕ್ಕೆ ಸಿಎಂ ಕುಮಾರಸ್ವಾಮಿಯವರು ಸುದ್ದಿಯಾಗುತ್ತಲೆ ಇದ್ದಾರೆ. ಮಗನ ಪರ ಪ್ರಚಾರಕ್ಕೆ ಇಳಿದಿರುವ ಕುಮಾರಸ್ವಾಮಿ ನಿಖಿಲ್ ಅನ್ನು ಗೆಲ್ಲಿಸುತ್ತೇವೆ ಎಂದು ಟೊಂಕ ಕಟ್ಟಿ ನಿಂತಿದ್ದಾರೆ.
Comments