20 ಶಾಸಕರು ಅಲ್ಲ, 78 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ಡಿ ಕೆ ಶಿವಕುಮಾರ್

ಲೋಕಸಭಾ ಚುನಾವಣೆಯು ಮುಗಿದರೂ ಇನ್ನೂ ಊಹಾಪೋಹಗಳು ಕಡಿಮೆ ಆಗಿಲ್ಲ… ಆ ಪಕ್ಷದಿಂದ ಈ ಪಕ್ಷಕ್ಕೆ, ಈ ಪಕ್ಷದಿಂದ ಆ ಪಕ್ಷಕ್ಕೆ ಜಿಗಿಯುತ್ತಲೆ ಇದ್ದಾರೆ.. ಈಗಾಗಲೇ ಸಾಕಷ್ಟು ಅತೃಪ್ತ ಶಾಸಕರು ಪಕ್ಷ ಬಿಟ್ಟಿದ್ದಾರೆ. ರಮೇಶ್ ಜಾರಕಿಹೊಳಿ ಕೂಡ ಪಕ್ಷ ಬಿಡುವುದಾಗಿ ಹೇಳಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ದೇವರು ಒಳ್ಳೆಯದನ್ನು ಮಾಡಲಿ ಅಂತ ಸಚಿವ ಡಿ.ಕೆ ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ.
ಇಂದು ಡಿಕೆ ಶಿವಕುಮಾರ್ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರಿಗೆ ಕಾಂಗ್ರೆಸ್ ಪಕ್ಷವನ್ನು ತೊರೆಯುವ ಬಗ್ಗೆ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ಇದೇ ವೇಳೆ ಅವರು ಮಾತನಾಡಿ ಬಿಜೆಪಿಯವರು ದಡ್ಡರಿದ್ದಾರೆ. ಅವರ ಬಳಿ ಕೇವಲ 20 ಜನ ಕಾಂಗ್ರೆಸ್ ಶಾಸಕರು ಮಾತ್ರ ಇಲ್ಲ. ಕಾಂಗ್ರೆಸ್ ನ ಎಲ್ಲ 78, ಜೆಡಿಎಸ್ ನ ಎಲ್ಲ ಶಾಸಕರು ಬಿಜೆಪಿಯವರ ಜೊತೆ ವಿಶ್ವಾಸದೊಂದಿಗೆ ಇದ್ದಾರೆ ಅಂತ ತಿಳಿಸಿದರು.. ಒಟ್ಟಾರೆಯಾಗಿ ದೋಸ್ತಿ ಸರ್ಕಾರವನ್ನು ಉರುಳಿಸಲು ವಿರೋಧ ಪಕ್ಷದವರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ.. ಆದರೆ ಅದ್ಯಾವುದು ಕೂಡ ಸಾಧ್ಯವಾಗುವುದಿಲ್ಲ ಎಂದಿದ್ದಾರೆ.. ದೋಸ್ತಿ ಸರ್ಕಾರ ಸುಭದ್ರವಾಗಿದೆ ಎಂದು ತಿಳಿಸಿದ್ದಾರೆ.
Comments