ರೈತರ ಸಾಲಮನ್ನಾ ಕುರಿತು ಸಿಹಿಸುದ್ದಿ ನೀಡಿದ ಸಿಎಂ ಹೆಚ್.ಡಿ.ಕೆ

ರಾಜ್ಯದಲ್ಲಿ ದೋಸ್ತಿ ಸರ್ಕಾರ ಬಂದ ದಿನದಿಂದಲೂ ಕೂಡ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುಇತ್ತಲೇ ಇವೆ.. ಅದರಲ್ಲೂ ರೈತರ ಸಾಲ ಮನ್ನಾ ಕುರಿತಾಗಿ ಸಾಕಷ್ಟು ಚರ್ಚೆಗಳು ಆಗುವೆ.. ಈ ವಿಷಯವನ್ನೆ ಇಟ್ಟುಕೊಂಡು ಸರ್ಕಾರವನ್ನು ಉರುಳಿಸಲು ಸಾಕಷ್ಟು ಪ್ರಯತ್ನಗಳು ಆದರೂ ಕೂಡ ಯಾವುದೇ ಪ್ರಯೋಜನವಾಗಲಿಲ್ಲ…ಇದೀಗ ಸಿಎಂ ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ವಿಷಯ ಕುರಿತಾಗಿ ಮಾಹಿತಿಯೊಂದನ್ನು ತಿಳಿಸಿದ್ದಾರೆ.
ರೈತರ ಸಾಲಮನ್ನ ಕುರಿತು ಯೋಜನೆಯ ಅನುಸಾರ ಶೀಘ್ರವೇ ಕ್ರಮ ಕೈಗೊಳ್ಳಬೇಕು. ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ 1.5 ಲಕ್ಷ ರೈತರ 900 ಕೋಟಿ ಸಾಲಮನ್ನಾ ಮೊತ್ತ ಬಿಡುಗಡೆಯಾಗಬೇಕು ಎಂದು ಅಧಿಕಾರಿಗಳಿಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಸಾಲಮನ್ನಾ ಕುರಿತು ಗಂಭೀರ ಚಿಂತನೆ ನಡೆಸಿದ್ದು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿಎಂ ಗೃಹ ಕಛೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಸಾಲಮನ್ನಾ ಯೋಜನೆಯನ್ನು ಕ್ರಮಬದ್ದವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು... 2018 ರ ಡಿಸೆಂಬರ್ ತಿಂಗಳಿನಿಂದ ರೈತರ ಸಾಲವನ್ನು ಹಂತಹಂತವಾಗಿ ಅವರ ಖಾತೆಗೆ ಭರ್ತಿ ಮಾಡಲಾಗುತ್ತಿದೆ. ಈವರೆಗೆ ಸಹಕಾರ ಸಂಘಗಳ 8.3 ಲಕ್ಷ ರೈತರಿಗೆ 3500 ಕೋಟಿ ರೂ. ಸಾಲ ಮನ್ನಾ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು...ಸಹಕಾರ ಸಂಘಗಳಲ್ಲಿ ರೈತರು ನಿಯಮಾವಳಿಗಳಂತೆ ಅರ್ಹತೆ ಪಡೆದ ದಿನದಂದು ಅವರ ಖಾತೆಗೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಾಗಾಂಬಿಕಾ ದೇವಿ ಸಿಎಂ ಗೆ ಸಂಪೂರ್ಣ ವಿವರ ನೀಡಿದ್ದಾರೆ. ಒಟ್ಟಿನಲ್ಲಿ ಈಗಾಗಲೇ ಕೆಲವು ರೈತರ ಸಾಲಮನ್ನಾ ಆಗಿದ್ದು ಇನ್ನೂ ಸಾಕಷ್ಟು ಜನ ರೈತರ ಸಾಲ ಮನ್ನಾ ಬಾಕಿಯಿದೆ… ಅದನ್ನು ಕೂಡ ಅತೀ ಶೀಘ್ರದಲ್ಲಿ ಮನ್ನಾ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Comments