ಸಿಎಂ ಬದಲಾವಣೆ ಕೂಗಿಗೆ ದ್ವನಿಗೂಡಿಸಿದ ಕಾಂಗ್ರೆಸ್ ಮುಖಂಡ..!!

ರಾಜ್ಯದಲ್ಲಿ ಸಿಎಂ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿನಿಂದಲೂ ಕೂಡ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇವೆ…ಇದೀಗ ಮತ್ತೊಂದು ಸಮಸ್ಯೆಯು ಎದುರಾದಂತೆ ಕಾಣುತ್ತಿದೆ. ಅದಕ್ಕೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಚಲುವರಾಯಸ್ವಾಮಿ ಹೇಳಿಕೆಯನ್ನು ಕೊಟ್ಟಿದ್ದಾರೆ..
ನಮಗೆ ಎಲ್ಲ ಸಮುದಾಯವನ್ನು ಪ್ರತಿನಿಧಿಸುವವರು ಮುಖ್ಯಮಂತ್ರಿಯಾಗಬೇಕು ಎನ್ನುವ ಮೂಲಕ ಸಿಎಂ ಕುಮಾರಸ್ವಾಮಿ ಬದಲಾವಣೆಯಾಗಬೇಕೆಂಬ ಕೂಗಿಗೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಚಲುವರಾಯಸ್ವಾಮಿ ಪರೋಕ್ಷವಾಗಿ ಸಿದ್ದರಾಮಯ್ಯನವರಿಗೆ ಬೆಂಬಲವನ್ನು ಸೂಚಿಸಿದ್ದಾರೆ… ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವು ಸಮುದಾಯಕ್ಕೆ ಮಾತ್ರ ಮುಖ್ಯಮಂತ್ರಿಯಾದರೆ ಸಾಲದು. ಎಲ್ಲ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯವನ್ನು ಮುನ್ನಡೆಸುವಂತಹ ನಾಯಕತ್ವ ನಮಗೆ ಬೇಕಾಗಿದೆ ಎಂದು ಪರೋಕ್ಷವಾಗಿ ಕುಮಾರಸ್ವಾಮಿಯವರಿಗೆ ಟಾಂಗ್ ಕೊಟ್ಟಿದ್ದಾರೆ.. ಒಟ್ಟಿನಲ್ಲಿ ಕುಮಾರಸ್ವಾಮಿಯವರು ಅಧಿಕಾರದಿಂದ ಕೆಳಗಿಳಿಸಲು ಸಾಕಷ್ಟು ಪ್ರಯತ್ನವಂತೂ ನಡೆಯುತ್ತಿದೆ
Comments