ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮಕ್ಕೆ ಆಯೋಗ ಸೂಚನೆ..! ಕಾರಣ ಏನ್ ಗೊತ್ತಾ..?

ಲೋಕಸಮರ ಮುಗಿದರು ಕೂಡ ಅದರ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ.. ಅಷ್ಟೆ ಅಲ್ಲದೆ ಫಲಿತಾಂಶದ ದಿನಾಂಕ ಕೂಡ ಹತ್ತಿರ ಬರುತ್ತಿದೆ. ಆದರೂ ಕೂಡ ಆರೋಪ, ಪ್ರತ್ಯಾರೋಪಗಳು ಹೆಚ್ಚಾಗಿಯೇ ಕೇಳಿ ಬರುತ್ತಿವೆ.. ಚುನಾವಣಾ ಆಯೋಗಕ್ಕೆ ಮೊನ್ನೆ ಮೊನ್ನೆಯಷ್ಟೆ ಸುಮಲತಾ ಅವರ ಮೇಲೆ ವಕೀಲರು ದೂರು ಸಲ್ಲಿಸಿದ್ದರು…ಇದೀಗ ಪ್ರಜ್ವಲ್ ರೇವಣ್ಣ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ..
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ನೀಡಿರುವ ಕುರಿತು ತನಿಖೆ ನಡೆಸಿದ ಚುನಾವಣಾ ಆಯೋಗ ಕ್ರಮ ಕೈಗೊಳ್ಳುವಂತೆ ಹಾಸನ ಜಿಲ್ಲಾಧಿಕಾರಿಗೆ ಸೂಚನೆಯನ್ನು ನೀಡಿದೆ..ಬಿಜೆಪಿ ಅಭ್ಯರ್ಥಿ ಎ. ಮಂಜು ಹಾಗೂ ವಕೀಲ ದೇವರಾಜೇಗೌಡ ಜಿಲ್ಲಾಧಿಕಾರಿಗೆ ಮತ್ತು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಅಭ್ಯರ್ಥಿ ಎ. ಮಂಜು ಸುಳ್ಳು ಮಾಹಿತಿ ಗಂಭೀರ ಪ್ರಕರಣವಾಗಿದ್ದು, ಕ್ರಮ ಕೈಗೊಳ್ಳಲೇಬೇಕು. ಇಲ್ಲದ್ದಿದ್ದಲ್ಲಿ ಹೈಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.ಒಟ್ಟಿನಲ್ಲಿ ಚುನಾವಣೆಯ ಫಲಿತಾಂಶ ಬರುವವರೆಗೂ ಕೂಡ ಆರೋಪಗಳು ಪ್ರತ್ಯಾರೋಪಗಳು ಕೇಳಿ ಬರುತ್ತಲೇ ಇರುತ್ತವೆ.. ಈ ಬ್ಗಗೆ ಚುನಾವಣಾ ಆಯೋಗ ಯಾವ ರೀತಿ ಮುಂದುವರೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Comments