ಮೈತ್ರಿ ಸರ್ಕಾರದ ಜೊತೆ ಸಂಪರ್ಕದಲ್ಲಿ ಇದ್ದಾರಂತೆ ಬಿಜೆಪಿ ಶಾಸಕರು..!!

15 May 2019 2:42 PM | Politics
1659 Report

ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಜೋರಾಗಿಯೇ ನಡೆಯುತ್ತಿದೆ. ಒಂದು ಪಕ್ಷದಿಂದ ಪಕ್ಷಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ… ಲೋಕಸಭೆಯ ಚುನಾವಣೆಯ  ಹೊತ್ತಿನಲ್ಲಿ ಸಾಕಷ್ಟು ಅತೃಪ್ತ ಶಾಸಕರು ಪಕ್ಷ ಬಿಟ್ಟು ಪಕ್ಷಕ್ಕೆ ಸೇರಿಕೊಂಡಿದ್ದರು.. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಲ್ಲ. ರಾಜ್ಯದಲ್ಲಿ ಬಿಜೆಪಿಯ ಆಪರೇಷನ್ ಕಮಲ ಯಾಕೋ  ಯಶಸ್ವಿಯಾದಂಗೆ ಕಾಣಲಿಲ್ಲ..

ಇದೀಗ ಬಿಜೆಪಿಯ ರೀತಿಯಲ್ಲಿಯೇ ಕಾಂಗ್ರೆಸ್ ಕೂಡ ಆಪರೇಷನ್ ಹಸ್ತ ಶುರು ಮಾಡಿಕೊಂಡಿದೆ..  ಕಾಂಗ್ರೆಸ್ ಕೂಡ ಆಪರೇಷನ್ ಮಾಡುತ್ತಿದೆ. ನಮ್ಮೊಂದಿಗೂ ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಖರ್ಗೆ, ಮೈತ್ರಿ ಸರ್ಕಾರ ಪತನ ಆಗುತ್ತೆ ಅನ್ನೋದು ಬಿಜೆಪಿಯ ಅಪಪ್ರಚಾರ, ಸಚಿವ ಡಿ.ಕೆ.ಶಿವಕುಮಾರ್, ಶಾಸಕಾಂಗ ಸಭೆಯ ನಾಯಕ, ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಿಂದಲೂ ಆಪರೇಷನ್ ಹಸ್ತ ನಡೆಯುತ್ತಿದೆ ಎಂದರು. ಒಟ್ಟಿನಲ್ಲಿ ಇನ್ನೂ ಫಲಿತಾಂಶ ಬರುವ ವೇಳೆಯಷ್ಟರಲ್ಲಿ ಯಾರು ಯಾವ ಪಕ್ಷಕ್ಕೆ ಜಿಗಿಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments