ಗೆಲುವಿಗಾಗಿ ದೇವರಿಗೆ ಮೇಕೆ ಬಿಟ್ಟು ಹರಕೆ ಹೊತ್ತ ಅಭಿಮಾನಿಗಳು..!! ಹರಕೆ ನಿಖಿಲ್ ಗೋ, ಸುಮಲತಾ ಗೋ..?

ಲೋಕಸಭಾ ಚುನಾವಣೆಯ ಫಲಿತಾಂಶ ಬರುವುದಕ್ಕೆ ಇನ್ನೆರಡು ದಿನ ಮಾತ್ರ ಬಾಕಿಯಿದೆ… ದೇಶದ ಎಲ್ಲಾ ಜಿಲ್ಲೆಗಳಿಗಿಂತ ಮಂಡ್ಯ ಜಿಲ್ಲೆ ಮಾತ್ರ ಸಿಕ್ಕಾಪಟ್ಟೆ ಸದ್ದು ಮಾಡಿತ್ತು…ದೋಸ್ತಿ ಅಭ್ಯರ್ಥಿಯಾಗಿ ನಿಖಿಲ್ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಖಾಡಕ್ಕೆ ಇಳಿದಿದ್ದರು..ಇಬ್ಬರ ಮದ್ಯೆಯು ಕೂಡ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿತ್ತು…ಫಲಿತಾಂಶದ ದಿನ ಹತ್ತಿರ ಬರುತ್ತಿದ್ದಂತೆ ಎಲ್ಲಿರಲ್ಲಿಯೂ ಕೂಡ ಒಂಥರಾ ಭಯ ಶುರುವಾಗಿ ಬಿಟ್ಟಿದೆ.. ಯಾರ ಪಾಲಿಗೆ ಗೆಲುವು, ಯಾರ ಪಾಲಿಗೆ ಸೋಲು ಎಂಬುದನ್ನು ಲೆಕ್ಕಾಚಾರ ಹಾಕುತ್ತಿದ್ದಾರೆ.
ಹೆಚ್ಚು ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಗೆಲುವಿಗಾಗಿ ಇದೀಗ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ನಿನ್ನೆ ಸುಮಲತಾ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದರು. ಇಂದು ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ದೇವಾಲಯದಲ್ಲಿ ನಿಖಿಲ್ ಗೆಲುವಿಗಾಗಿ ಅಭಿಮಾನಿಗಳಿಂದ ಉರುಳು ಸೇವೆ ಮಾಡಿ ಮೇಕೆಗಳನ್ನು ದೇವರಿಗೆ ಹರಕೆ ಹೊತ್ತುಕೊಳ್ಳುತ್ತಿದ್ದಾರೆ. ಚುನಾವಣೋತ್ತರ ಸಮೀಕ್ಷೆಯ ಆಧಾರದ ಮೇಲೆ ಗೆಲುವು ತಮ್ಮದೇ ಎಂದು ನಿಖಿಲ್ ಅಭಿಮಾನಿಗಳು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಸಮೀಕ್ಷಗಳ ಪ್ರಕಾರ ಗೆಲುವು ನಮ್ಮದೇ ಅನ್ನೋದು ನಿಖಿಲ್ ಅಭಿಮಾನಿಗಳ ಮಾತಾಗಿದೆ... ಮತ್ತೊಂದು ಕಡೆ ಸಮೀಕ್ಷೆಗಳೆಲ್ಲಾ ಸುಳ್ಳು, ಸುಮಲತಾ ಅವರೇ ಗೆಲ್ಲುವುದು ಎಂದು ಸುಮಲತಾ ಅವರ ಅಭಿಮಾನಿಗಳು ಹೇಳುತ್ತಿದ್ದಾರೆ.. ಒಂದು ಕಡೆ ಸುಮಲತಾ, ಮತ್ತೊಂದು ಕಡೆ ನಿಖಿಲ್,, ಯಾರ ಕೊರಳಿಗೆ ವಿಜಯದ ಮಾಲೆ ಎಂಬುದು ಇನ್ನೆರಡು ದಿನಗಳಲ್ಲಿ ತಿಳಿಯುತ್ತದೆ.
Comments