ಮೈತ್ರಿ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಬಿಜೆಪಿಯ ಪ್ರಭಾವಿ ಶಾಸಕ..!!
ಲೋಕಸಭಾ ಚುನಾವಣೆಯ ಫಲಿತಾಂಶ ನಾಳೆ ಹೊರ ಬೀಳಲಿದ್ದು ಅಭ್ಯರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ.. ಈ ಹೊತ್ತಿನಲ್ಲಿಯೇ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬೆಳವಣಿಗೆಗಳು ಕಂಡು ಬರುತ್ತಿವೆ… ಆದರೆ ಇದೇ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರು ಮೈತ್ರಿ ಸರ್ಕಾರದ ಬಗ್ಗೆ ಭವಿಷ್ಯವನ್ನು ನುಡಿದಿದ್ದಾರೆ..
ನಾಳೆ ಸಂಜೆವರೆಗೆ ಮಾತ್ರ ಕುಮಾರಸ್ವಾಮಿ ಅವರು ಸಿಎಂ ಆಗಿರುತ್ತಾರೆ. ನಾಡಿದ್ದು ,ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರೆ, ಹೊಸ ಸರ್ಕಾರಕ್ಕೆ ವೇದಿಕೆ ಸಿದ್ದ ಆಗುತ್ತದೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಭವಿಷ್ಯವನ್ನು ನುಡಿದಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಸದಾನಂದಗೌಡರು ಆಂದ್ರ ಸಿಎಂ ಚಂದ್ರಬಾಬು ನಾಯ್ಡು ಮನಸ್ಥಿತಿ ಕುಮಾರಸ್ವಾಮಿ ಅವರಲ್ಲೂ ಇದೆ. ನಾಯ್ಡು ಇಮೇಜ್ ಕಳೆದುಕೊಂಡಿದ್ದಾರೆ. ಅಧಿಕಾರ ಕಳೆದುಕೊಳ್ಳುತ್ತಿರುವವರು ಒಂದೆಡೆ ಸೇರುತ್ತಿದ್ದಾರೆ ಎಂದು ವ್ಯಂಗ್ಯಮಾತುಗಳನ್ನು ಆಡಿದ್ದಾರೆ. ಇನ್ನು ರೋಷನ್ ಬೇಗ್ ಹೇಳಿಕೆ ವಿಚಾರವಾಗಿ ಮಾತನಾಡಿದ ಸದಾನಂದಗೌಡ, ಸತ್ಯವನ್ನು ಬಹಳ ಕಾಲ ಮುಚ್ಚಿಡಲು ಸಾಧ್ಯವಿಲ್ಲ ಎಂದಿದ್ದಾರೆ.. ಒಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಯಾವೆಲ್ಲ ರೀತಿಯ ಬದಲಾವಣೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.
Comments