ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ಮಾಡ್ತಿದ್ದಾರೆ ಬಿಗ್ ಮಾಸ್ಟರ್ ಪ್ಲಾನ್..!

ಅಂತೂ ಇಂತೂ ಲೋಕಸಮರದ ಫಲಿತಾಂಶ ಹೊರ ಬಂದೇ ಬಿಡ್ತು... ಯಾರು ಊಹಿಸಲಾಗದ ರೀತಿಯಲ್ಲಿ ಬಿಜೆಪಿ 25 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. ಇದೀಗ ಲೋಕಸಭೆ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ಅತೃಪ್ತ ಶಾಸಕರನ್ನು ಸೆಳೆಯಲು ರಮೇಶ್ ಜಾರಕಿಹೊಳಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ ಎಂದು ಬಿಜೆಪಿ ಶಾಸಕರು ಹೇಳುತ್ತಿದ್ದರೆ, ಮತ್ತೊಂದು ಕಡೆ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಇದೇ ಕಾರಣಕ್ಕಾಗಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿಎಂ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ವರ್ಷವೇ ಕಳೆಯಿತು.. ಮೈತ್ರಿ ಸರ್ಕಾರವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಬೇಕು ಎಂದು ಮಾಸ್ಟರ್ ಪ್ಲಾನ್ ಒಂದನ್ನು ಕುಮಾರಸ್ವಾಮಿಯವರು ಮಾಡಿದ್ದಾರಂತೆ.. ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುತ್ತಿಲ್ಲ. ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳ ಅಭಿವೃದ್ಧಿಯತ್ತ ಗಮನ ನೀಡುತ್ತಿಲ್ಲ ಎಂದು ಅತೃಪ್ತರ ಬಣ ಆರೋಪಿಸುತ್ತಿದೆ. ಈ ಆರೋಪದಿಂದ ಮುಕ್ತರಾಗಲು ಸಿಎಂ ಕೈ ಶಾಸಕರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಶಾಸಕರ ವಿಶ್ವಾಸ ಗಳಿಸಲು ಸಿಎಂ ಕುಮಾರಸ್ವಾಮಿ ಮುಂದಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಒಟ್ಟಾರೆಯಾಗಿ ಸರ್ಕಾರವು ಪತನವಾಗುವ ಹಂತಕ್ಕೆ ಬಂದ ಮೇಲೆ ಕುಮಾರಸ್ವಾಮಿಯವರು ಅಭಿವೃದ್ದಿಯಯತ್ತ ಮುಖ ಮಾಡಿದ್ದಾರೆ ಎನ್ನಬಹುದು..
Comments