ಮಾಜಿ ಸಿಎಂ ಸಿದ್ದರಾಮಯ್ಯಗೆ 'ಬಿಗ್ ಶಾಕ್': ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನದಿಂದ ಕೊಕ್..?
ಲೋಕಸಭಾ ಚುನಾವಣೆ ಫಲಿತಾಂಶ ಬಂದ ಮೇಲೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬರುತ್ತಿವೆ… ಲೋಕಸಮರ ಫಲಿತಾಂಶದಲ್ಲಿ ಕಾಂಗ್ರೆಸ್ ಕೇವಲ ಒಂದೇ ಒಂದು ಸ್ಥಾನಕ್ಕೆ ತೃಪ್ತಿ ಪಟ್ಟು ಕೊಂಡಿದೆ… ಈ ನಿಟ್ಟಿನಲ್ಲಿಯೇ ಸಾಕಷ್ಟು ಅತೃಪ್ತ ಶಾಸಕರು ಪಕ್ಷ ಬಿಡುವ ಚಿಂತನೆಯಲ್ಲಿ ಇದ್ದಾರೆ.. ಈ ನಡುವೆ ದೋಸ್ತಿ ಪಕ್ಷದಲ್ಲಿ ಯಾವುದು ಸರಿ ಇಲ್ಲ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತವೆ.
ಹೀಗಾಗಿಯೇ ಕಾಂಗ್ರೆಸ್ ನಲ್ಲಿ ಹಲವು ಮಂದಿಯ ಸ್ಥಾನಗಳು ಬದಲಾಗುವ ನಿರೀಕ್ಷೆಗಳು ಕೂಡ ಹೆಚ್ಚಾಗಿವೆ.. ಇದೇ ಸಾಲಿಗೆ ಸಿದ್ದರಾಮಯ್ಯಯವರು ಹೊಂದಿರುವ ಎರಡು ಸ್ಥಾನಗಳಲ್ಲಿ ಒಂದು ಸ್ಥಾನವನ್ನು ವಾಪಸ್ಸು ಪಡೆದುಕೊಳ್ಳುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ ಎಂದು ಹೇಳಲಾಗುತ್ತಿದೆ.. ಸಿದ್ದರಾಮಯ್ಯ ಅವರು ಸದ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನವನ್ನು ಹೊಂದಿದ್ದು, ಅದರ ಪೈಕಿ ಸಮನ್ವಯ ಸಮಿತಿ ಅಧ್ಯಕ್ಷದಿಂದ ಅವರಿಗೆ ಕೊಕ್ ನೀಡಿ ಆ ಸ್ಥಾನಕ್ಕೆ ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗುವುದು ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನು ಕಂಡಿರುವುದಂತೂ ನಿಜ.. ಮುಂದೆ ರಾಜ್ಯ ರಾಜಕಾರಣದಲ್ಲಿ ಯಾವೆಲ್ಲ ರೀತಿಯ ಬದಲಾವಣೆಗಳು ಆಗುತ್ತವೆ ಎಂಬುದನ್ನಯ ಕಾದು ನೋಡಬೇಕಿದೆ.
Comments