ಸುಮಲತಾ ಅಂಬರೀಶ್ ಮುಖಾಂತರ ದೇವೆಗೌಡರಿಗೆ ಟಾಂಗ್ ಕೊಡ್ತಾರ ಮೋದಿ..!?

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಅಖಾಡದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಖಾಡಕ್ಕೆ ಇಳಿದು ವಿಜಯಶಾಲಿಯಾಗಿ ಗೆದ್ದು ಬಂದಿದ್ದಾರೆ.. ಇದೀಗ ಅವರಿಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವ ಸ್ಥಾನ ಸಿಗತ್ತಾ ಎಂಬ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿವೆ…. ಮಂಡ್ಯದ ಸಂಸದೆ ಇದೀಗ ಸುಮಲತಾ ಅಂಬರೀಶ್ ಅವರು ಕೇಂದ್ರ ಸಚಿವರಾಗ್ತಾರ ಎಂಬ ಕುತೂಹಲ ಹೆಚ್ಚಾಗಿದೆ…
ಅಷ್ಟೆ ಅಲ್ಲದೆ ಸುಮಲತಾ ಅಂಬರೀಶ್ ಅವರು ಚುನಾವಣೆಗೆ ಮುನ್ನವೇ ಮೋದಿ ಜೀ ಯವರ ಬಾಹ್ಯ ಬೆಂಬಲವನ್ನು ಪಡೆದುಕೊಂಡಿದ್ದರು ಎಂದು ಹೇಳಲಾಗುತ್ತಿದ್ದು, ಸುಮಲತಾ ಅವರನ್ನು ಮಂತ್ರಿ ಮಾಡುವುದರ ಮೂಲಕ ದೇವೇಗೌಡರಿಗೆ ಟಾಂಗ್ ಕೊಡುವ ಲೆಕ್ಕಚಾರವನ್ನುಮೋದಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.. ಕಾಂಗ್ರೆಸ್ ಮತ್ತು ಜೆಡಿಎಸ್ ನ ಪ್ರಭಾವ ಮಂಡ್ಯ ಮತ್ತು ಮೈಸೂರು ಭಾಗದಲ್ಲಿ ಹೆಚ್ಚಾಗಿದೆ ಹಾಗಾಗಿ ಆ ಪಕ್ಷಗಳ ಪ್ರಭಾವವನ್ನು ಕುಗ್ಗಿಸಲು ಹಾಗೂ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಮೋದಿ ಬಿಗ್ ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೋದಿ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಬೆಂಬಲ ಸೂಚಿಸಿದ್ದರು. ಹೀಗಾಗಿ ಸುಮಲತಾ ಅವರಿಗೆ ಮೋದಿ ಸಚಿವ ಸ್ಥಾನ ಕೊಡುತ್ತಾರೆ ಎಂದು ಹೇಳಲಾಗುತ್ತಿದೆ. ಲೋಕಸಮರದ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿವೆ… ಮುಂದೆ ಸುಮಲತಾ ಅವರಿಗೆ ಸಚಿವ ಸ್ಥಾನ ಸಿಗುತ್ತದೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.
Comments