ದೋಸ್ತಿ ಸರ್ಕಾರ ಉಳಿಸಲು ಬಿಗ್ ಮಾಸ್ಟರ್ ಪ್ಲಾನ್..!

ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಂದ ಮೇಲೆ ಸದ್ಯ ಇರುವ ದೋಸ್ತಿ ಸರ್ಕಾರ ಪತನವಾಗುತ್ತದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹೆಚ್ಚಾಗಿ ಕೇಳಿ ಬರುತ್ತಿವೆ.. ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿ ಪಕ್ಷಗಳ ನಾಯಕರು ಸರಣಿ ಸಭೆಗಳನ್ನು ಮಾಡುತ್ತಿದ್ದಾರೆ.. ಬಿಜೆಪಿಯು ಸ್ಪಷ್ಟ ಬಹುಮತ ಪಡೆದಿದ್ದು ಇಂದು ಮೋದಿಯವರು ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ. ದೋಸ್ತಿ ಸರ್ಕಾರದ ಉಳಿವಿಗಾಗಿ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದ್ದು ಇದೀಗ ದೆಹಲಿಗೆ ತೆರಳಲು ಸಿದ್ದವಾಗಿದ್ದಾರೆ..
ಈಗಾಗಲೇ ಬಿಜೆಪಿಯು ಸರ್ಕಾರವನ್ನು ರಚಿಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಬಿಜೆಪಿ ಸರ್ಕಾರ ರಚನೆ ಪ್ರಯತ್ನಕ್ಕೆ ಬ್ರೇಕ್ ಹಾಕಿ ದೋಸ್ತಿ ಸರ್ಕಾರವನ್ನು ಸುಭದ್ರವಾಗಿಸಿಕೊಳ್ಳುವ ನಿಟ್ಟಿನಲ್ಲಿ ದೋಸ್ತಿ ನಾಯಕರು ಕಾರ್ಯತಂತ್ರ ರೂಪಿಸಿದ್ದು, ಸಂಪುಟ ಪುನರ್ ರಚನೆಗೆ ಮುಂದಾಗಿದ್ದಾರೆ. ಕೆಲವು ಸಚಿವರಿಗೆ ರಾಜೀನಾಮೆ ನೀಡಲು ಸೂಚಿಸಲಾಗಿದ್ದು, ಅತೃಪ್ತ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗುವುದು ಎನ್ನಲಾಗಿದೆ. ಇದೇ ವೇಳೆ ವಾರದಿಂದ ಬೆಂಗಳೂರಿನಲ್ಲಿ ನಡೆಯುತ್ತಿದ್ದ ರಾಜ್ಯ ರಾಜಕೀಯ ಚಟುವಟಿಕೆಗಳು ದೆಹಲಿಗೆ ಶಿಫ್ಟ್ ಆಗಲಿವೆ. ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸಿಎಂ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರ ಮುಂದುವರಿಸಿಕೊಂಡು ಹೋಗುವ ಕುರಿತಾಗಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಒಟ್ಟಾರೆಯಾಗಿ ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನಗಳನ್ನು ಉಭಯ ಪಕ್ಷದ ನಾಯಕರು ಮಾಡುತ್ತಿದ್ದಾರೆ.
Comments