ಬಿಗ್ ಬ್ರೇಕಿಂಗ್: ರಾಜ್ಯದಲ್ಲಿ ಮಧ್ಯಂತರ ಚುನಾವಣೆ..!! ಬಿಜೆಪಿ ಪ್ರಭಾವಿ ಸಚಿವ ಹೀಗೆ ಹೇಳಿದ್ಯಾಕೆ..!!!

ರಾಜ್ಯ ರಾಜಕಾರಣದಲ್ಲಿ ಲೋಕಸಭೆಯ ಫಲಿತಾಂಶ ಬಂದ ಮೇಲೆ ಸಾಕಷ್ಟು ಬದಲಾವಣೆಗಳು ಆಗಿವೆ… ಬಿಜೆಪಿಯವರು ಲೋಕಸಭೆಯ ಫಲಿತಾಂಶ ಬಂದ ಮೇಲೆ ಹೀಗಿರುವ ದೋಸ್ತಿ ಸರ್ಕಾರ ಪತನವಾಗುತ್ತದೆ ಎಂದು ಸಾಕಷ್ಟು ಬಾರಿ ಹೇಳಿದ್ದರು.. ಆದರೆ ಇದೀಗ ಬೇರೆಯದ್ದೆ ರೀತಿಯಲ್ಲಿ ಹೇಳುತ್ತಿದ್ದಾರೆ.. ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಸುಳಿವು ದೊರಕಿದೆ ಎಂಬುದರ ಬಗ್ಗೆ ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ ಈ ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಕೇಂದ್ರ ಸಚಿವ ಡಿ. ವಿ. ಸದಾನಂದಗೌಡರು ಈ ರೀತಿಯಾದ ಹೇಳಿಕೆ ನೀಡಿದ್ದು, ನಾವು ಮೈತ್ರಿ ಸರ್ಕಾರ ಬೀಳಿಸಲು ಹೋಗಲ್ಲ ಅದರ ತಂಟೆಗೂ ಕೂಡ ಹೋಗಲ್ಲ.. . ಅವರಾಗಿಯೇ ಬೀಳಿಸಿದ್ರೆ ನಾವು ಹೊಣೆಯಲ್ಲ ಎಂದು ತಿಳಿಸಿದೆ... ಅವರಾಗಿಯೇ ಅವರ ಸರ್ಕಾರವನ್ನು ಬೀಳಿಸಿಕೊಂಡರೆ ಬಿಜೆಪಿ ಸರ್ಕಾರ ಬರಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ನಾವು ಮತ್ತೆ ಸಿಂಗಲ್ ಲಾರ್ಜೆಸ್ಟ್ ಪಕ್ಷವಾಗಿ ಅಧಿಕಾರ ಹಿಡಿಯುತ್ತೇವೆ ,ಅಭಿವೃದ್ದಿ ವಿಷಯದಲ್ಲಿ ನಾವು ಎಂದೂ ರಾಜಕಾರಣ ಬೆರೆಸುವುದಿಲ್ಲ. ನಾವು ರಾಜ್ಯದ ಪರವಾಗಿದ್ದೇವೆ. ನಾವಾಗಿಯೇ ಸರ್ಕಾರ ಬೀಳಿಸುವುದಿಲ್ಲ. ಅವರಾಗಿಯೇ ಸರ್ಕಾರ ಬೀಳಿಸಿಕೊಂಡರೆ ನಾವು ಹೊಣೆಯಲ್ಲ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದರು.. ರಾಜ್ಯ ರಾಜಕಾರಣದಲ್ಲಿ ಇನ್ನೂ ಯಾವೆಲ್ಲಾ ರೀತಿಯ ಬದಲಾವಣೆಗಳು ಆಗುತ್ತವೋ, ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.
Comments