ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸುಮಲತಾ ಅಂಬರೀಶ್ ನಡೆ..!?
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಅಖಾಡವು ಹೆಚ್ಚು ಸುದ್ದಿಯನ್ನು ಮಾಡಿತ್ತು.. ದೋಸ್ತಿ ನಾಯಕರ ಪರ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕೆ ಇಳಿದಿದ್ದರೆ ಅವರ ವಿರುದ್ದವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅಖಾಡಕ್ಕೆ ಇಳಿದಿದ್ದರು… ಇಬ್ಬರ ಮಧ್ಯೆ ಪ್ರಬಲ ಪೈಪೋಟಿ ಉಂಟಾಗಿದ್ದರೂ ಕೂಡ ಸುಮಲತಾ ಅವರು ಲಕ್ಷಕ್ಕಿಂತ ಹೆಚ್ಚು ಮತಗಳ ಅಂತರದಿಂದ ವಿಜಯಶಾಲಿಯಾದರು.. ಇದೀಗ ಅವರು ಯಾವ ಪಕ್ಷಕ್ಕೆ ಸೇರಿಕೊಳ್ಳುತ್ತಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿಸುತ್ತಿದೆ..
ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಭರ್ಜರಿ ಗೆಲುವು ಸಾಧಿಸಿರುವ ಸುಮಲತಾ ಅಂಬರೀಶ್ ಅವರು ಪಕ್ಷೇತರರಾಗಿಯೇ ಮುಂದುವರಿಯಲು ನಿರ್ಧಾರ ಮಾಡಿದ್ದಾರೆ. ಬಿಜೆಪಿಯು ಮಂಡ್ಯದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ಅವರಿಗೆ ಬೆಂಬಲ ಘೋಷಣೆ ಮಾಡಿತ್ತು.. ಚುನಾವಣೆಯಲ್ಲಿ ಗೆದ್ದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ `ನಾವಾಗಿಯೇ ಸುಮಲತಾ ಅವರನ್ನು ಪಕ್ಷಕ್ಕೆ ಆಹ್ವಾನಿಸುವುದಿಲ್ಲ. ಆದರೆ, ಅವರಾಗಿಯೇ ಬಂದರೆ ಸ್ವಾಗತಿಸಲಾಗುವುದು ಎಂದು ತಿಳಿಸಿದರು. ಇದೀಗ ಸುಮಲತಾ ಅಂಬರೀಶ್ ಅವರು ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗದೇ ಪಕ್ಷೇತರರಾಗಿಯೇ ಮುಂದುವರೆಯಲು ನಿರ್ಧಾರ ಮಾಡಿದ್ದಾರೆ ಆದರೆ, ವಿಷಯಾಧಾರಿತದ ಮೇಲೆ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಲಿದ್ದಾರೆ ಎಂಬುದು ಮಾತ್ರ ತಿಳಿದು ಬಂದಿದೆ..
Comments