ಎಚ್.ವಿಶ್ವನಾಥ್ ರಾಜೀನಾಮೆ ಹಿನ್ನಲೆ : ಜೆಡಿಎಸ್ ಮುಂದಿನ ರಾಜ್ಯಾಧ್ಯಕ್ಷ ಇವರೇನಾ..?
ಈಗಾಗಲೇ ರಾಜ್ಯ ಸರ್ಕಾರ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ… ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿವೆ… ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ಶಾಸಕ ಎಚ್.ವಿಶ್ವನಾಥ್ ಅವರು ರಾಜೀನಾಮೆ ನೀಡಿದ್ದಾರೆ.. ಇಂದು ವೇಳೆ ರಾಜೀನಾಮೆಯನ್ನು ಹಿಂಪಡೆಯದಿದ್ದರೆ ಆ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆಯೂ ಮೂಡಿದೆ..
ಪಕ್ಷದ ವರಿಷ್ಠರು ಸಹ ರಾಜ್ಯಾಧ್ಯಕ್ಷ ಹುದ್ದೆಗೆ ಯಾರು ಸೂಕ್ತ ಎಂಬ ಚಿಂತನೆಯಲ್ಲಿ ತೊಡಗಿದ್ದಾರೆ. ಮಾಜಿ ಶಾಸಕರಾದ ಮಧು ಬಂಗಾರಪ್ಪ, ವೈ.ಎಸ್.ವಿ.ದತ್ತ ಮತ್ತಿತರ ಹೆಸರುಗಳು ಹೆಚ್ಚಾಗಿ ಕೇಳಿ ಬರುತ್ತಿವೆ.. ದೋಸ್ತಿ ಸರ್ಕಾರ ಒಂದು ವೇಳೆ ಅಭದ್ರಗೊಂಡಲ್ಲಿ ಮಧ್ಯಂತರ ಚುನಾವಣೆ ಯಾವಾಗ ಬೇಕಾದರೂ ಎದುರಾಗುವ ಸಾಧ್ಯತೆ ಇರುವ ಕಾರಣ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಈ ಜವಾಬ್ದಾರಿ ವಹಿಸುವ ಬಗ್ಗೆ ಪಕ್ಷದಲ್ಲಿ ಆಲೋಚನೆ ನಡೆದಿದೆ ಎಂದು ಹೇಳಲಾಗಿದೆ. ಒಟ್ಟಾರೆಯಾಗಿ ದೋಸ್ತಿ ಸರ್ಕಾರದಲ್ಲಿ ಆತಂಕ ಸೃಷ್ಟಿಯಾಗಿದೆ.. ಸರ್ಕಾರ ಯಾವಾಗ ಪತನವಾಗುತ್ತದೆ ಎಂದು ವಿರೋಧ ಪಕ್ಷಗಳು ಕಾಯುತ್ತಿವೆ.. ಅದೇ ಸಮಯದಲ್ಲಿ ದೋಸ್ತಿ ಸರ್ಕಾರದವರು ಪಕ್ಷ ಬಿಡುತ್ತಿರುವುದು ಮತ್ತೊಂದು ತಲೆನೋವಾಗಿದೆ.
Comments