ರೋಷನ್ ಬೇಗ್ ವಿರುದ್ಧ ಹೈಕಮಾಂಡ್ ಗೆ ದೂರು ಕೊಟ್ಟ ದಿನೇಶ್ ಗುಂಡೂರಾವ್..!! ಕಾರಣ ಏನ್ ಗೊತ್ತಾ..?

ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ರಾಜಕೀಯ ವಲಯದಲ್ಲಿ ಸಾಕಷ್ಟು ಬೆಳವಣಿಗೆಗಳು ಕಂಡು ಬರುತ್ತಿವೆ. ಒಬ್ಬರ ಮೇಲೆ ಮತ್ತೊಬ್ಬರು ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದ ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೈಕಮಾಂಡ್ ಗೆ ದೂರು ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ರೋಷನ್ ಬೇಗ್ ಹಾಗೂ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಇದು ಪಕ್ಷ ವಿರೋಧಿ ಚಟುವಟಿಕೆಯಾಗುತ್ತದೆ ಹಾಗೂ ಇದರಿಂದ ಪಕ್ಷದ ಘನತೆಗೆ ಕುಂದುಂಟಾಗಿದೆ. ಅವರ ಎಲ್ಲಾ ಹೇಳಿಕೆಗಳನ್ನು ಸಂಗ್ರಹಿಸಿ ಹೈಕಮಾಂಡ್ ಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ಒಟ್ಟಾರೆಯಾಗಿ ರಾಜಕೀಯದಲ್ಲಿ ತಮ್ಮ ತಮ್ಮ ಸ್ವಪಕ್ಷಗಳಲ್ಲಿಯೇ ಬಿರುಕು ಉಂಟಾಗುತ್ತಿದೆ.. ಸದ್ಯ ದೋಸ್ತಿ ಸರ್ಕಾರಕ್ಕೆ ಯಾವುದೆ ತೊಂದರೆ ಆಗದಿದ್ದರೆ ಸಾಕು ಎಂಬಂತೆ ಆಗಿದೆ.. ಈ ನಡುವೆ ಸ್ವಪಕ್ಷಗಳಲ್ಲಿಯೇ ಭಿನ್ನಾಭಿಪ್ರಾಯ ಬರುತ್ತಿರುವುದು ದೋಸ್ತಿಯಲ್ಲಿ ಆತಂಕ ಶುರುವಾದಂತೆ ಆಗಿದೆ.
Comments