ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಸ್ಪಷ್ಟನೆ ಕೊಟ್ಟ ಸಿಎಂ ಕುಮಾರಸ್ವಾಮಿ

ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುವಂತಹ ವಿಷಯಗಳು ಸಾಕಷ್ಟಿವೆ.. ಅದರಲ್ಲಿ ಇತ್ತಿಚಿಗಷ್ಟೆ ನಿಖಿಲ್ ಕುಮಾರಸ್ವಾಮಿ ಕೊಟ್ಟ ಹೇಳಿಕೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ… ಚುನಾವಣೆ ಯಾವಾಗ ಬೇಕಾದರೂ ಕೂಡ ನಡೆಯಬಹುದು ಎಂಬ ಹೇಳಿಕೆಯನ್ನು ನೀಡಿದ್ದರು… ಕಾರ್ಯಕರ್ತರೆಲ್ಲಾ ತಯಾರಾಗಿರಿ ಎಂದು ನಿಖಿಲ್ ಕುಮಾರ್ ಕೊಟ್ಟ ಹೇಳಿಕೆಯ ಬಗ್ಗೆ ಸಾಕಷ್ಟು ಅನುಮಾನ ಹುಟ್ಟಿಸಿವೆ…
ಚುನಾವಣೆ ಯಾವಾಗ ಬರುತ್ತೋ ಗೊತ್ತಿಲ್ಲ, ಕಾರ್ಯಕರ್ತರೆಲ್ಲ ತಯಾರಾಗಿರಿ ಎಂದು ನಿಖಿಲ್ ಕುಮಾರ್ ಕೊಟ್ಟ ಹೇಳಿಕೆ ಬಗ್ಗೆ ಸಿಎಂ ಕುಮಾರಸ್ವಾಮಿ ಇದೀಗ ಸ್ಪಷ್ಟನೆಯನ್ನು ನೀಡಿದ್ದಾರೆ. ಮಾಧ್ಯಮ ಪ್ರಕಟಣೆ ಹೊರಡಿಸುವ ಮೂಲಕ ನಿಖಿಲ್ ಕುಮಾರ್ ಹೇಳಿಕೆಗೆ ಸಿಎಂ ಸ್ಪಷ್ಟನೆ ನೀಡಿದ್ದು, ಪಕ್ಷದ ಕಾರ್ಯಕರ್ತರು ಸದಾ ಸಮಾಜಸೇವೆಗೆ ಸನ್ನದ್ಧರಾಗಿರಬೇಕು. ಪಕ್ಷವನ್ನು ಚುರುಕಾಗಿಟ್ಟಿರಬೇಕು ಎಂದು ನಿಖಿಲ್ ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರನ್ನ ಹುರಿದುಂಬಿಸಿದ್ದಾರೆ ಎಂದು ತಿಳಿಸಿದರು.. ಈ ಮಾತನ್ನು ಮಾಧ್ಯಮಗಳು ಸಂದರ್ಭಕ್ಕೆ ತಕ್ಕಂತೆ ಉಲ್ಲೇಖಿಸಲಾಗಿದೆ ಎಂದರು... ಚುನಾವಣೆ ಯಾವಾಗ ಬೇಕಾದರೂ ಎದುರಾಗಬಹುದು ಎನ್ನುವಂತೆ ಬಿಂಬಿಸಲಾಗಿದೆ. ಇದು ವಾಸ್ತವಕ್ಕೆ ದೂರವಾದ ಸಂಗತಿ ಎಂದಿದ್ದಾರೆ. ನಮ್ಮ ಮೈತ್ರಿ ಸರ್ಕಾರ ಐದು ವರ್ಷ ಸಂಪೂರ್ಣವಾಗಿ ಆಡಲಿತವನ್ನು ನಡೆಸುತ್ತದೆ ಎಂದರು.
Comments