ಕಮಲವನ್ನು ಅರಳಿಸಲು ಮುಂದಾದ 12 ಶಾಸಕರು..!! ಯಾರ್ಯಾರು ಗೊತ್ತಾ..?

ಈ ಭಾರಿ ಲೋಕಸಭಾ ಚುನಾವಣೆಯ ಫಲಿತಾಂಶದಿಂದಾಗಿ ಎಲ್ಲವೂ ಕೂಡ ಬದಲಾಗುವಂತೆ ಕಾಣುತ್ತಿದೆ…ಸಾಕಷ್ಟು ಅತೃಪ್ತ ಶಾಸಕರು ಪಕ್ಷವನ್ನು ಬಿಟ್ಟು ಬೇರೆ ಪಕ್ಷಕ್ಕೆ ಪಕ್ಷಾಂತರಗೊಳ್ಳುತ್ತಿದ್ದಾರೆ. ಇದೀಗ ಮತ್ತೊಬ್ಬ ಕಾಂಗ್ರೆಸ್ ನ ಪ್ರಭಾವಿ ಶಾಸಕ ಬಿಜೆಪಿ ಗೆ ಸೇರಿಕೊಳ್ಳುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದ್ದಾರೆ. ಪಕ್ಷದಲ್ಲಿ ತಮ್ಮನು ಸರಿಯಾಗಿ ಯಾರು ನಡೆಸಿಕೊಳ್ಳುತ್ತಿಲ್ಲ, ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಹೀನಾಯವಾಗಿ ಸೋತಿದೆ.
ಕಾಂಗ್ರೆಸ್ ಹೈಕಮಾಂಡ್ ಅತೃಪ್ತ ಶಾಸಕರನ್ನು ಕಡೆಗಣಿಸಿರುವುದರಿಂದ ರೊಚ್ಚಿಗೆದ್ದಿರುವ ಸುಮಾರು 12 ಮಂದಿ ಬಿಜೆಪಿಯತ್ತ ವಲಸೆ ಹೋಗಿ ಸರ್ಕಾರದ ಪತನಕ್ಕೆ ವೇದಿಕೆ ಸಿದ್ಧಪಡಿಸುತ್ತಿದ್ದಾರೆ. ರಮೇಶ್ ಜಾರಕಿ ಹೊಳಿ, ಮಹೇಶ್ ಕುಮಟಳ್ಳಿ, ಬಿ.ಸಿ.ಪಾಟೀಲ್, ಪ್ರತಾಪ್‍ಗೌಡ ಪಾಟೀಲ್, ಆನಂದ್‍ಸಿಂಗ್, ಜೆ.ಎನ್.ಗಣೇಶ್, ಸುಧಾಕರ್, ಶಿವರಾಮ್ ಹೆಬ್ಬಾರ್ ಸೇರಿದಂತೆ ಸುಮಾರು 12ಕ್ಕೂ ಹೆಚ್ಚು ಮಂದಿ ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಆನಂದ್‍ರಾವ್ ವೃತ್ತದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆಗೆ ಕುಳಿತು ಗಮನವನ್ನು ಬೇರೆಡೆ ಸೆಳೆಯುತ್ತಿದ್ದರೆ, ಅತ್ತ ತೆರೆಮರೆಯಲ್ಲಿ ಆಪರೇಷನ್ ಕಮಲ ಚುರುಕಿನಿಂದ ನಡೆಯುತ್ತಿದೆ ಎಂದು ಹೇಳಲಾಗಿದೆ. ಅಂದುಕೊಂಡಂತೆ ಎಲ್ಲವೂ ನಡೆದರೆ ಈ ತಿಂಗಳಾಂತ್ಯದೊಳಗೆ ಸಮ್ಮಿಶ್ರ ಸರ್ಕಾರಕ್ಕೆ ಸಂಖ್ಯಾಬಲದ ಕೊರತೆ ಇದೆ ಎಂದು ರಾಜ್ಯಪಾಲರಿಗೆ ದೂರು ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ..
Comments