ತನ್ನ ಹುದ್ದೆಗೆ ರಾಜೀನಾಮೆ ನೀಡಿದ ಹಿರಿಯ ಜೆಡಿಎಸ್ ಶಾಸಕ..!!

ಈ ಭಾರಿ ಲೋಕಸಭಾ ಚುನಾವಣೆಯ ಫಲಿತಾಂಶದಿಂದಾಗಿ ಎಲ್ಲವೂ ಕೂಡ ಬದಲಾಗುವಂತೆ ಕಾಣುತ್ತಿದೆ…ಸಾಕಷ್ಟು ಅತೃಪ್ತ ಶಾಸಕರು ಪಕ್ಷವನ್ನು ಬಿಟ್ಟು ಬೇರೆ ಪಕ್ಷಕ್ಕೆ ಪಕ್ಷಾಂತರಗೊಳ್ಳುತ್ತಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯದಲ್ಲಿ ಹೀನಾಯವಾಗಿ ಸೋತಿದೆ. ಇದೀಗ ಜೆಡಿಎಸ್ ನ ಮತ್ತೊಬ್ಬ ಶಾಸಕ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಉದ್ಯಮಿ ಖೋಡೆ ಕುಟುಂಬವು ಬೆಂಗಳೂರು ನಗರದ ಬಿ.ಎಂ.ಕಾವಲು ಪ್ರದೇಶದಲ್ಲಿ 310 ಎಕರೆ ಜಾಗವನ್ನು ಅತಿಕ್ರಮಣ ಮಾಡಿ ಕೊಂಡಿದ್ದರೂ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳದ ಕಾರಣಕ್ಕಾಗಿ ಆಡಳಿತಾರೂಢ ಜೆಡಿಎಸ್‌ನ ಹಿರಿಯ ಶಾಸಕ ಎ.ಟಿ.ರಾಮಸ್ವಾಮಿ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಇದೀಗ ಬಹಿರಂಗವಾಗಿದೆ. ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರಿಗೆ ರಾಮಸ್ವಾಮಿ ಅವರು ಬರೆದಿರುವ ಆರು ಪುಟಗಳ ಸುದೀರ್ಘ ರಾಜೀನಾಮೆ ಪತ್ರದಲ್ಲಿ ಯಾವ ಕಾರಣಕ್ಕಾಗಿ ತಮ್ಮ ಹುದ್ದೆಗೆ ರಾಜೀ ನಾಮೆ ನೀಡಲಾಗುತ್ತಿದೆ ಎಂಬುದರ ಬಗ್ಗೆ ಸವಿವರವಾಗಿ ತಿಳಿಸಿದ್ದಾರೆ ಎನ್ನಲಾಗಿದೆ.. ದೋಸ್ತಿಯಲ್ಲಿ ಒಮ್ಮತ ಅಭಿಪ್ರಾಯವಿಲ್ಲದೆ ಸಾಕಷ್ಟು ಶಾಸಕರು ಪಕ್ಷ ಬಿಡಲು ನಿರ್ಧಾರ ಕೂಡ ಮಾಡಿದ್ದಾರೆ ಎನ್ನಲಾಗಿದೆ.
Comments