ಎಚ್ ವಿಶ್ವನಾಥ್ ನಂತರ ನಿಖಿಲ್ ಕುಮಾರಸ್ವಾಮಿ JDS ರಾಜ್ಯಧ್ಯಾಕ್ಷರಾಗ್ತಾರ..!! ಈ ಬಗ್ಗೆ ಜಿಟಿ ದೇವೇಗೌಡರು ಹೇಳಿದ್ದೇನು..?

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಅಖಾಡ ಹೆಚ್ಚು ಸದ್ದು ಮಾಡಿತ್ತು… ದೋಸ್ತಿ ಸರ್ಕಾರದ ಪರವಾಗಿ ನಿಖಿಲ್ ಅಖಾಡಕ್ಕೆ ಇಳಿದಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಖಾಡಕ್ಕೆ ಇಳಿದಿದ್ದರು… ಇಬ್ಬರ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿತ್ತು.. ಸುಮಲತಾ ನಿಖಿಲ್ ಪರವಾಗಿ ನಿಂತು ಜಯಶಾಲಿಯಾಗಿ ಹೊರಹೊಮ್ಮಿದ್ದರು..ಜೆಡಿಎಸ್ ನ ರಾಜ್ಯಾಧ್ಯಕ್ಷರಾದ ಎಚ್ ವಿಶ್ವನಾಥ್ ರಾಜೀನಾಮೆ ನೀಡಿದ್ದಾರೆ. ಆದರೆ ಆ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ..
ಜೆಡಿಎಸ್ ರಾಜ್ಯಾಧ್ಯಕ್ಷರ ರೇಸ್ ನಲ್ಲಿ ನಿಖಿಲ್ ಕುಮಾರಸ್ವಾಮಿ ಹೆಸರು ಪದೇ ಪದೇ ಕೇಳಿ ಬರುತ್ತಿತ್ತು.. ಆದರೆ ಇದಕ್ಕೆ ಜಿ ಟಿ ದೇವೆಗೌಡರು ಸ್ಪಷ್ಟನೆ ಕೊಟ್ಟಿದ್ದಾರೆ. ನಿಖಿಲ್ ಕುಮಾರಸ್ವಾಮಿಯವರು ಈ ರೇಸ್ ನಲ್ಲಿ ಇಲ್ಲ ಎಂದು ತಿಳಿಸಿದ್ದಾರೆ. ಯಾರ್ಯಾರೋ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಚಿವ ಜಿ. ಡಿ. ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೆಗೌಡರು ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ವಿಶ್ವನಾಥ್ ಅವರ ರಾಜೀನಾಮೆ ಇನ್ನೂ ಅಂಗೀಕಾರ ಆಗಿಲ್ಲ. ಅಂಗೀಕಾರ ಆದ ಮೇಲೆ ಬದಲಾವಣೆ ಮಾತು. ಅವರ ರಾಜೀನಾಮೆ ಅಂಗೀಕಾರ ಆಗುವವರೆಗೂ ಬೇರೆ ಹೆಸರುಗಳ ಬಗ್ಗೆ ಚರ್ಚೆ ಮಾಡುವ ಮಾತೇ ಇಲ್ಲ ಎಂದು ತಿಳಿಸಿದರು. ರಾಜೀನಾಮೆಯೆ ಅಂಗಿಕಾರವಾಗದೇ ಬದಲಾವಣೆಯ ಮಾತು ವ್ಯರ್ಥ ಎಂದಿದ್ದಾರೆ.
Comments