ಮಧ್ಯಂತರ ಚುನಾವಣೆಗೆ ರೆಡಿಯಾಗಿ ಎಂದ ದೇವೇಗೌಡರು..! ಕಾರಣ ಏನ್ ಗೊತ್ತಾ..?

ಇಂದಿನ ರಾಜಕೀಯ ಪರಿಸ್ಥಿತಿ ನೋಡುತ್ತಿದ್ದರೆ ದಿನ ಕಳೆದಂತೆ ಪರಿಸ್ಥಿತಿ ಕ್ಲಿಷ್ಟಕರವಾಗುತ್ತಿದೆ. ಇದನ್ನು ನೋಡುತ್ತಿದ್ದರೆ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯುವುದು ಬಹುತೇಕ ಖಚಿತ ಎಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಈಗಾಗಲೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವ ಹೆಚ್ ವಿಶ್ವನಾಥ್ ಅವರಿಗೆ ರಾಜೀನಾಮೆಯನ್ನು ವಾಪಸ್ ಪಡೆದು ಜೆಡಿಎಸ್‌ನ್ನು ಮುನ್ನಡೆಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಿಗ್ನಲ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ..
ದೇವೇಗೌಡರು ನೀಡಿದ ಈ ವಿವರದ ಹಿನ್ನೆಲೆಯಲ್ಲಿ ತಮ್ಮ ರಾಜೀನಾಮೆ ನಿರ್ಧಾರವನ್ನು ವಿಶ್ವನಾಥ್ ಅವರು ಪುನರ್ ಪರಿಶೀಲಿಸತೊಡಗಿದ್ದು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವ ಲಕ್ಷಣಗಳು ಹೆಚ್ಚಾಗಿವೆ ಎಂದು ಹೇಳಲಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಇಂದು ವಿಶ್ವನಾಥ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ದೇವೇಗೌಡರು, ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ನಿಮ್ಮನ್ನು ಬಿಟ್ಟು ಬೇರೆಯವರನ್ನು ತಂದು ಕೂರಿಸಲು ತಮಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ರಾಜೀನಾಮೆಯನ್ನು ವಾಪಸ್ ಪಡೆಯುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ. ಅವರ ಜಾಗಕ್ಕೆ ಬೇರೆಯವರನ್ನು ಕೂರಿಸಲು ಸಾಧ್ಯವಿಲ್ಲ ಎಂದು ದೇವೆಗೌಡರು ತಿಳಿಸಿದ್ದಾರೆ. ಹಾಗಾಗಿ ವಿಶ್ವನಾಥ್ ಹಿಂಪಡೆಯಬಹುದು ಎಂಬ ಮಾತುಗಳು ಕೇಳಿಬರುತ್ತಿವೆ..
Comments